ದ್ವಿತೀಯ ಪಿಯು ವಿದ್ಯಾರ್ಥಿಗಳೇ ಗಮನಿಸಿ: ಪರೀಕ್ಷೆ ಮುಂದೂಡಿಕೆ ಸಾಧ್ಯತೆ

0
61

ಪಠ್ಯಕ್ರಮ ಪೂರ್ಣಗೊಳಿಸಲು ಸಮಯಾವಕಾಶ ಬೇಕಿರುವುದರಿಂದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮುಂದೂಡಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. ಒಂದು ತಿಂಗಳು ವಿಳಂಬವಾಗಿ ಪರೀಕ್ಷೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಕೊರೋನಾ ಕಾರಣದಿಂದಾಗಿ ಶೈಕ್ಷಣಿಕ ಅವಧಿ ಕಡಿತಗೊಂಡಿದೆ. ಇದರ ಪರಿಣಾಮ ಪಠ್ಯಕ್ರಮ ಪೂರ್ಣಗೊಳಿಸಲು ಸಮಯ ಬೇಕಿದ್ದು, ಪರೀಕ್ಷೆಯನ್ನು ಮುಂದೂಡುವ ಚಿಂತನೆ ನಡೆಸಲಾಗಿದೆ. ಪ್ರತಿ ವರ್ಷ ಮಾರ್ಚ್ ವೇಳೆಗೆ ನಡೆಯುತ್ತಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಈ ಬಾರಿ ಮೇ -ಜೂನ್ ನಲ್ಲಿ ನಡೆಯುವ ಸಾಧ್ಯತೆಯಿದೆ.

ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ದ್ವಿತೀಯ ಪಿಯುಸಿ ಅಂಕಗಳು ಪ್ರಮುಖವಾಗಿರುವುದರಿಂದ ಪಠ್ಯಕ್ರಮ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಪಠ್ಯಕ್ರಮ ಪೂರ್ಣಗೊಳಿಸಬೇಕಿರುವುದರಿಂದ 15 -20 ದಿನ ತಡವಾಗಿ ಪರೀಕ್ಷೆ ಆರಂಭವಾಗಬಹುದು ಎಂದು ಹೇಳಲಾಗಿದೆ.

LEAVE A REPLY

Please enter your comment!
Please enter your name here