ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿರುದ್ಧ ಚುನಾವಣಾ ಆಯೋಗ ಎಫ್ಐಆರ್ ದಾಖಲಿಸಿದೆ. ಹೌದು ಸಾಮಾಜಿಕ ಜಾಲತಾಣದಲ್ಲಿ ಧರ್ಮದ ಆಧಾರದ ಮೇಲೆ ದ್ವೇಷವನ್ನು ಹುಟ್ಟುಹಾಕಿದ ಆರೋಪದ ಮೇಲೆ ಎಫ್ಐಆರ್ ದಾಖಲಿಸಿದೆ. ಸಿ.ಟಿ. ರವಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ರಾಹುಲ್ ಗಾಂಧಿ ಹೇಳಿಕೆ ಉಲ್ಲೇಖಿಸಿ ದ್ವೇಷ ಹುಟ್ಟುಹಾಕುವ ಪೋಸ್ಟ್ ಹಾಕಿದ್ದರು. ಇದು ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಚುನಾವಣಾ ಆಯೋಗದ ಸಾಮಾಜಿಕ ಜಾಲತಾಣಗಳ ಮೇಲ್ವಿಚಾರಣ ಸಮಿತಿಯ ಸಹಾಯಕ ಚುನಾವಣಾಧಿಕಾರಿಯೊಬ್ಬರು ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಎಫ್ಐಆರ್ ದಾಖಲಾಗಿದೆ.
ದ್ವೇಷಪೂರಿತ ಹೇಳಿಕೆ; ಸಿ.ಟಿ.ರವಿ ವಿರುದ್ಧ ದೂರು ದಾಖಲು
Date: