ಧರ್ಮಯಾತ್ರೆ: ಬಿಜೆಪಿಯವರದ್ದು ಎಲ್ಲದರಲ್ಲೂ ರಾಜಕೀಯ – ಸಿಎಂ ಸಿದ್ದರಾಮಯ್ಯ

tnit editors
1 Min Read

ಧರ್ಮಯಾತ್ರೆ: ಬಿಜೆಪಿಯವರದ್ದು ಎಲ್ಲದರಲ್ಲೂ ರಾಜಕೀಯ – ಸಿಎಂ ಸಿದ್ದರಾಮಯ್ಯ

ಮೈಸೂರು: ಬಿಜೆಪಿ ಎಲ್ಲದರಲ್ಲಿಯೂ ರಾಜಕೀಯ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ನಗರದಲ್ಲಿ ಬಿಜೆಪಿಯವರು ಧರ್ಮಸ್ಥಳಕ್ಕೆ ಧರ್ಮಯಾತ್ರೆ ಕೈಗೊಳ್ಳುತ್ತಿರುವ ಬಗ್ಗೆ ಮಾತನಾಡಿದ ಅವರು, ಬಿಜೆಪಿ ಎಲ್ಲದರಲ್ಲಿಯೂ ರಾಜಕೀಯ ಮಾಡುತ್ತಾರೆ.
ಯಾತ್ರೆ ಹೋದರೆ ಹೋಗಲಿ. ಎಸ್ ಐ.ಟಿ ರಚನೆಯನ್ನು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರೇ ಸ್ವಾಗತಿಸಿದ್ದಾರೆ. ಸತ್ಯ ಹೊರ ಬರಬೇಕೆಂಬ ಕಾರಣದಿಂದ ಎಸ್ಐಟಿ ರಚನೆ ಮಾಡಲಾಗಿದೆ. ಇಲ್ಲದಿದ್ದರೆ ಧರ್ಮಸ್ಥಳದ ಬಗ್ಗೆ ಯಾವಾಗಲೂ ತೂಗುಗತ್ತಿ ಇರುತಿತ್ತು.
ಈ ಸಂದೇಹವನ್ನು ಹೋಗಲಾಡಿಸಲು ಎಸ್.ಐ.ಟಿ ರಚನೆ ಮಾಡಲಾಗಿದೆ. ಫೀರ್ಯಾದುದಾರ ನ್ಯಾಯಾಲಯದ ಮುಂದೆ ಹೋಗಿ 164 ಹೇಳಿಕೆಯನ್ನು ನೀಡಿದ್ದಾರೆ. ಅನೇಕ ಸಂಘ ಸಂಸ್ಥೆಗಳು ಎಸ್ ಐಟಿ ರಚಿಸಬೇಕೆಂದು ಒತ್ತಾಯವನ್ನು ಮಾಡಿದ್ದರು. ಬಿಜೆಪಿಯವರು ಕೂಡ ಇದನ್ನು ಸ್ವಾಗತಿಸಿದ್ದರು. ಈಗ ಮಾತ್ರ ರಾಜಕೀಯ ಮಾಡುತ್ತಿದ್ದಾರೆ. ಅವರಿಗೆ ಧರ್ಮ ಗೊತ್ತಿಲ್ಲ ಎಂದರು.

Share This Article