ಧರ್ಮಸ್ಥಳಕ್ಕೆ ಬಿಜೆಪಿ ಯಾತ್ರೆ: ರಾಜಕೀಯ ಲಾಭ ಸಿಗುವುದಿಲ್ಲ – ಸಿಎಂ ಸಿದ್ದರಾಮಯ್ಯ

Date:

ಧರ್ಮಸ್ಥಳಕ್ಕೆ ಬಿಜೆಪಿ ಯಾತ್ರೆ: ರಾಜಕೀಯ ಲಾಭ ಸಿಗುವುದಿಲ್ಲ – ಸಿಎಂ ಸಿದ್ದರಾಮಯ್ಯ

ಮೈಸೂರು: ಬಿಜೆಪಿಯವರು ಧರ್ಮಸ್ಥಳಕ್ಕೆ ಯಾತ್ರೆ ಕೈಗೊಂಡಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೇ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜಕೀಯವಾಗಿ ಯಾತ್ರೆ ಕೈಗೊಂಡಿದೆ. ಅವರಿಗೆ ರಾಜಕೀಯ ಲಾಭ ಸಿಗುತ್ತದೆ ಎಂದು ಭಾವಿಸಿದ್ದಾರೆ.
ಆದರೆ ಅದು ಸಿಗುವುದಿಲ್ಲ. ಏಕೆಂದರೆ ಧರ್ಮಸ್ಥಳದ ಬಗ್ಗೆ ನಮಗೆ ಅಪಾರವಾದ ಗೌರವವಿದೆ. ಎಸ್ಐಟಿ ರಚಿಸಿದಾಗ ವಿರೋಧ ಮಾಡದೆ ಇದ್ದವರು, ನಂತರದಲ್ಲಿ ಏನೂ ಸಿಗುವುದಿಲ್ಲ ಎಂದು ತಿಳಿದು ವಿರೋಧಿಸುತ್ತಿದ್ದಾರೆ. ಇದು ಢೋಂಗಿತನ ಎಂದರು.
ಮೈಸೂರಿಗೂ ಚಾಮುಂಡಿ ಚಲೋ ಕಾರ್ಯಕ್ರಮ ಹಮ್ಮಿಕೊಂಡಿರುವ ಬಗ್ಗೆ ಮಾತನಾಡಿ ಬಿಜೆಪಿಯವರು ಹಿಂದುತ್ವ ಗಟ್ಟಿಯಾಗುತ್ತದೆ, ಹಿಂದೂಗಳೆಲ್ಲ ಒಟ್ಟಾಗುತ್ತಾರೆ ಎಂದು ತಿಳಿದಿದ್ದಾರೆ. ನಾನೂ ಕೂಡ ಹಿಂದೂವೇ.
ನಮ್ಮೂರಿನಲ್ಲಿ ನಾವು ರಾಮಮಂದಿರ ಕಟ್ಟಿಲ್ಲವೇ? ಎಂದು ಪ್ರಶ್ನಿಸಿದರು. ಹಿಂದುಗಳೆಂದರೆ ರಾಜಕೀಯ, ಅಪಪ್ರಚಾರ ಮಾಡುವುದಲ್ಲ, ಸುಳ್ಳು ಹೇಳುವುದಲ್ಲ. ಯಾರೇ ಆದರೂ ಮನಷ್ಯತ್ವವಿರಬೇಕು ಎಂದರು. ಬಿಜೆಪಿ ದಸರಾ ಹಬ್ಬದಲ್ಲೂ ರಾಜಕಾರಣ ಮಾಡುತ್ತಿದ್ದಾರೆ. ಸುಳ್ಳು ಹೇಳುವುದು ಬಿಟ್ಟು ಬೇರೇನಾದರೂ ಅವರಿಗೆ ಬರುತ್ತದೆಯೇ ಎಂದರು.

Share post:

Subscribe

spot_imgspot_img

Popular

More like this
Related

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ಬಿಜೆಪಿಯವರಿಗೆ...

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...