ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ: ನೇತ್ರಾವತಿ ನದಿಗೆ ಎಸ್‌ಐಟಿ ಭೇಟಿ – ಸ್ಥಳ ಮಹಜರು ಆರಂಭ
ಮಂಗಳೂರು: ಧರ್ಮಸ್ಥಳದಲ್ಲಿ ಕಳೆದ ಎರಡು ದಶಕಗಳಿಂದ ನಡೆದಿದೆ ಎನ್ನಲಾದ ಅಸಹಜ ಸಾವುಗಳು, ಅತ್ಯಾಚಾರ ಮತ್ತು ನಾಪತ್ತೆ ಪ್ರಕರಣಗಳು ರಾಜ್ಯದಾದ್ಯಂತ ಚರ್ಚೆಗೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಎಸ್ಐಟಿ ತಂಡವು ನೇತ್ರಾವತಿ ನದಿಯ ತಟದಲ್ಲಿ ಸ್ಥಳ ಮಹಜರು ಕಾರ್ಯ ಆರಂಭಿಸಿದೆ.
ವಿಚಾರಣೆ ವೇಳೆ ದೂರುದಾರನೊಬ್ಬ, ನೇತ್ರಾವತಿ ನದಿಯ ಸ್ನಾನಘಟ್ಟದ ಬಳಿ ತಲೆ ಬುರುಡೆಯನ್ನು ಹೊರತೆಗೆದಿರುವ ಬಗ್ಗೆ ಮಾಹಿತಿ ನೀಡಿದ್ದನು. ಈ ಹಿನ್ನೆಲೆಯಲ್ಲಿ ಎಸ್ಐಟಿ ತಂಡವು ಫೊರೆನ್ಸಿಕ್, ಕಂದಾಯ, ಅರಣ್ಯ ಹಾಗೂ ಸರ್ವೇ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸ್ಥಳ ಪರಿಶೀಲನೆ ಆರಂಭಿಸಿದೆ.
ಎಸ್ಐಟಿ ಎಸ್ಪಿ ಸಿ.ಎ.ಸೈಮನ್ ನೇತೃತ್ವದಲ್ಲಿ, ದೂರುದಾರನನ್ನು ಸ್ಥಳಕ್ಕೆ ಕರೆತರಲಾಗಿದ್ದು, ಬಿಗಿ ಪೊಲೀಸ್ ಭದ್ರತೆ ನಡುವೆ ಸ್ಥಳ ಮಹಜರು ನಡೆಯುತ್ತಿದೆ. ಹಿರಿಯ ಅಧಿಕಾರಿಗಳಾದ ಜಿತೇಂದ್ರ ಕುಮಾರ್ ದಯಾಮ್, ಅರಣ್ಯ ರೇಂಜರ್ ತ್ಯಾಗರಾಜ್ ಸೇರಿದಂತೆ ಹಲವು ಅಧಿಕಾರಿಗಳು ಸ್ಥಳೀಯ ಪರಿಶೀಲನೆಗೆ ಹಾಜರಾಗಿದ್ದಾರೆ.
ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ: ನೇತ್ರಾವತಿ ನದಿಗೆ ಎಸ್‌ಐಟಿ ಭೇಟಿ – ಸ್ಥಳ ಮಹಜರು ಆರಂಭ
Date: