ಧವನ್ ಔಟ್, ನಾಟೌಟ್, ಔಟ್..! ರಿಷಭ್​ಗೆ ಸಿಕ್ಕೇ ಬಿಡ್ತು ಚಾನ್ಸ್..!

Date:

3ನೇ ಬಾರಿ ವಿಶ್ವಕಪ್ ಗೆಲ್ಲಲು ವಿರಾಟ್​ ಕೊಹ್ಲಿ ಸಾರಥ್ಯದ ಭಾರತ ತಂಡ ಸಕಲ ರೀತಿಯಲ್ಲಿ ತಯಾರಾಗಿದೆ. ವಿರಾಟ್​ ಪಡೆ ಈಗಾಗಲೇ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದು, ಎದುರಾಳಿಗಳಲ್ಲಿ ನಡುಕು ಹುಟ್ಟಿ ಬಿಟ್ಟಿದೆ. ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಹಾಗೂ ಪಾಕಿಸ್ತಾನದ ವಿರುದ್ಧ ಭರ್ಜರಿ ಜಯಭೇರಿ ಬಾರಿಸಿದೆ. ನ್ಯೂಜಿಲೆಂಡ್ ವಿರುದ್ಧ ಕೂಡ ಗೆಲ್ಲುವ ವಿಶ್ವಾಸದಲ್ಲಿತ್ತು. ಆದರೆ, ವರುಣ ಆಟಕ್ಕೆ ಬಿಡಲಿಲ್ಲ. ಸೌತ್ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ವಿರುದ್ಧ ಆಡಿದ್ದ ಶಿಖರ್ ಧವನ್ ಗಾಯದ ಸಮಸ್ಯೆಯಿಂದ ಪಾಕ್ ವಿರುದ್ಧದ ಪಂದ್ಯದಿಂದ ಹೊರಗಿದ್ದರು.
ಆಸ್ಟ್ರೇಲಿಯಾ ವಿರುದ್ಧ ಶತಕ ಸಿಡಿಸಿದ್ದ ಶಿಖರ್ ಧವನ್..ವಿಶ್ವಕಪ್​ನಲ್ಲಿ ರೋಹಿತ್ ಶರ್ಮಾ ಜೊತೆಗೆ ತಂಡಕ್ಕೆ ಭದ್ರ ಅಡಿಪಾಯ ಹಾಕಿಕೊಡುವ ವಿಶ್ವಾಸದಲ್ಲಿದ್ದರು. ಆದರೆ, ಧವನ್ ಅದೇ ಪಂದ್ಯದ ಸಮಯದಲ್ಲಿ ಎಡಗೈ ಹೆಬ್ಬೆರಳಿಗೆ ಗಾಯ ಮಾಡಿಕೊಂಡಿದ್ದರು. ಧವನ್ ಗಾಯಗೊಂಡಿದ್ದಾರೆ ಎನ್ನುವ ಸುದ್ದಿ ಬರುತ್ತಿದ್ದಂತೆ ಧವನ್ ವಿಶ್ವಕಪ್​ನಿಂದಲೇ ಹೊರ ಬರುತ್ತಾರೆ ಎನ್ನುವ ಸುದ್ದಿಯೂ ಬಂದಿತ್ತು..! ಧವನ್ ಅವರ ಬದಲಿಗೆ ರಿಷಭ್ ಪಂತ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗುತ್ತದೆ ಎಂಬ ಮಾತುಗಳು ಕೇಳಿಬಂದಿದ್ದವು. ಅವರಲ್ಲದೆ ಅಜಿಂಕ್ಯಾರಹಾನೆ, ಶ್ರೇಯಸ್ ಅಯ್ಯರ್ ಅವರ ಹೆಸರುಗಳೂ ಇದ್ದವು. ಆದರೆ, ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಧವನ್ ಅವರನ್ನೇ ಉಳಿಸಿಕೊಳ್ಳಲು ನಿರ್ಧರಿಸಿತ್ತು. ಬಿಸಿಸಿಐನ ಮೆಡಿಕಲ್ ಟೀಮ್ ಧವನ್ ಅವರನ್ನು ಅಬ್ಸರ್ವೇಷನ್​ನಲ್ಲಿರಿಸಿತ್ತು. ಈಗ ಅಂತಿಮವಾಗಿ ಧವನ್ ಆಡುವುದು ಕಷ್ಟ ಎಂಬ ತೀರ್ಮಾನಕ್ಕೆ ಬರಲಾಗಿದ್ದು, ಧವನ್ ವಿಶ್ವಕಪ್​ನಿಂದಲೇ ಹೊರಗುಳಿಯುತ್ತಿದ್ದಾರೆ. 33 ವರ್ಷದ ಧವನ್ ಮುಂದಿನ ವಿಶ್ವಕಪ್​ ಆಡುವುದು ಕಷ್ಟ..! ಹೀಗಾಗಿ ಅವರ ಕೊನೆಯ ವಿಶ್ವಕಪ್ ಆಡುವ ಕನಸು ಕೂಡ ನುಚ್ಚುನೂರಾಗಿದೆ. ಧವನ್ ಬದಲಿಗೆ ರಿಷಭ್ ಪಂತ್ 15 ಸದಸ್ಯರ ಟೀಮ್ ಇಂಡಿಯಾವನ್ನು ಸೇರಿಕೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ ಬೆಳಗಾವಿ ಜಿಲ್ಲೆಯ ಖಾನಾಪುರ...

ಬಿಹಾರ ಚುನಾವಣೆಯಲ್ಲಿ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

ಬಿಹಾರ ಚುನಾವಣೆಯಲ್ಲಿ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ ಮೈಸೂರು: ಬಿಹಾರ...

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..?

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..? ಬೆಂಗಳೂರು:...

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ ಬೇಕು

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ...