ಧಾರವಾಡ ಹೈಕೋರ್ಟ್ ಪೀಠ ಸೇರಿ ಮೂರು ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ ಇ-ಮೇಲ್

Date:

ಧಾರವಾಡ ಹೈಕೋರ್ಟ್ ಪೀಠ ಸೇರಿ ಮೂರು ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ ಇ-ಮೇಲ್

ಧಾರವಾಡ: ಧಾರವಾಡದಲ್ಲಿರುವ ಹೈಕೋರ್ಟ್ ಪೀಠಕ್ಕೆ ಕಿಡಿಗೇಡಿಗಳು ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಿರುವ ಘಟನೆ ನಡೆದಿದೆ. ಇ-ಮೇಲ್ ಮೂಲಕ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ವಕೀಲರು ಮತ್ತು ಸಿಬ್ಬಂದಿ ತಕ್ಷಣ ನ್ಯಾಯಾಲಯ ಕಟ್ಟಡದಿಂದ ಹೊರಬಂದರು.

ವಿಷಯ ತಿಳಿದ ಕೂಡಲೇ ಗರಗ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು. ಒಂದು ತಿಂಗಳ ಹಿಂದೆಯೂ ಇದೇ ರೀತಿಯ ಬೆದರಿಕೆ ಇ-ಮೇಲ್ ಸಂದೇಶ ಬಂದಿದ್ದ ಘಟನೆ ನೆನಪಿಸಲಾಗಿದೆ.

ದಾವಣಗೆರೆ ಜಿಲ್ಲಾ ನ್ಯಾಯಾಲಯಕ್ಕೂ ಬೆದರಿಕೆ

ಇದನ್ನೇ ಮಾದರಿಯಾಗಿ ದಾವಣಗೆರೆ ಜಿಲ್ಲಾ ನ್ಯಾಯಾಲಯಕ್ಕೂ ಸಹ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಅಪರಿಚಿತ ವ್ಯಕ್ತಿಯೊಬ್ಬ RDX ಸ್ಫೋಟಿಸುವುದಾಗಿ ಮಧ್ಯಾಹ್ನ 12:30ಕ್ಕೆ ಸಂದೇಶ ಕಳುಹಿಸಿದ್ದಾನೆ ಎನ್ನಲಾಗಿದೆ. ತಮಿಳುನಾಡು ಮೂಲದ ವ್ಯಕ್ತಿಯಿಂದ ನ್ಯಾಯಾಧೀಶರಿಗೆ ಈ ಬೆದರಿಕೆ ಸಂದೇಶ ಬಂದಿರುವುದು ತಿಳಿದುಬಂದಿದೆ.

ಈ ಹಿನ್ನೆಲೆಯಲ್ಲಿ ನ್ಯಾಯಾಲಯದ ಕಲಾಪವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ, ಶ್ವಾನ ದಳ ಮತ್ತು ಭದ್ರತಾ ಸಿಬ್ಬಂದಿಯಿಂದ ತಪಾಸಣೆ ನಡೆಸಲಾಗಿದೆ.

ಮಡಿಕೇರಿ ನ್ಯಾಯಾಲಯಕ್ಕೂ ಇ-ಮೇಲ್

ಮಡಿಕೇರಿ ನ್ಯಾಯಾಲಯಕ್ಕೂ ಬಾಂಬ್ ಇಟ್ಟಿರುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಕಳುಹಿಸಲಾಗಿದೆ. ನ್ಯಾಯಾಲಯದ ಅಧಿಕೃತ ಇ-ಮೇಲ್ ಐಡಿಗೆ ಬಂದ ಈ ಸಂದೇಶದ ಹಿನ್ನೆಲೆ ಕಲಾಪವನ್ನು ನಿಲ್ಲಿಸಿ, ಬಾಂಬ್ ಪತ್ತೆ ದಳದಿಂದ ಶೋಧ ಕಾರ್ಯ ಕೈಗೊಳ್ಳಲಾಗಿದೆ.

ಮೂರು ನ್ಯಾಯಾಲಯಗಳಿಗೂ ಬಂದಿರುವ ಬೆದರಿಕೆ ಸಂದೇಶಗಳ ಕುರಿತು ಪೊಲೀಸರು ಗಂಭೀರವಾಗಿ ತನಿಖೆ ನಡೆಸುತ್ತಿದ್ದು, ಇ-ಮೇಲ್ ಮೂಲ ಪತ್ತೆಗೆ ಸೈಬರ್ ವಿಭಾಗ ಸಹಕಾರ ನೀಡುತ್ತಿದೆ.

Share post:

Subscribe

spot_imgspot_img

Popular

More like this
Related

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರು:...

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ...

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ, ವಿಮಾನ ಹಾರಾಟ ತಾತ್ಕಾಲಿಕ ಸ್ಥಗಿತ

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ,...

ಎಳೆಯ ಮಕ್ಕಳಿಗೆ ಡ್ರ್ಯಾಗನ್ ಫ್ರೂಟ್ ನೀಡಬಹುದೇ? ಇಲ್ಲಿದೆ ಮಾಹಿತಿ

ಎಳೆಯ ಮಕ್ಕಳಿಗೆ ಡ್ರ್ಯಾಗನ್ ಫ್ರೂಟ್ ನೀಡಬಹುದೇ? ಇಲ್ಲಿದೆ ಮಾಹಿತಿ ಮಕ್ಕಳು ಆರೋಗ್ಯವಾಗಿಯೂ ಸದೃಢವಾಗಿಯೂ...