ಧೋನಿಗೆ ಶೇನ್ ವ್ಯಾಟ್ಸನ್ ಕಡೆಯಿಂದ ವಿಶೇಷ ಸಂದೇಶ

Date:

2020ರ ಐಪಿಎಲ್ ಟೂರ್ನಿಯಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನವನ್ನೇನೂ ನೀಡದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಂಕಪಟ್ಟಿಯಲ್ಲಿ ಏಳನೇ ಸ್ಥಾನಕ್ಕೆ ತೃಪ್ತಿಗೊಂಡು ಲೀಗ್ ಹಂತದಲ್ಲಿಯೇ ಟೂರ್ನಿಯಿಂದ ಹೊರಬಿದ್ದಿತ್ತು. ಕಳೆದ ಬಾರಿ ನೀಡಿದ ಕಳಪೆ ಪ್ರದರ್ಶನದಿಂದ ಹೊರಬಂದು ಈ ಬಾರಿ ಐಪಿಎಲ್ ಟೂರ್ನಿಯಲ್ಲಿ ಯಶಸ್ಸಿನ ಹಾದಿಗೆ ಮರಳಲು ಚೆನ್ನೈ ಸೂಪರ್ ಕಿಂಗ್ಸ್ ತಂಡ ಕಠಿಣಾಭ್ಯಾಸವನ್ನು ನಡೆಸಿ ಸಜ್ಜಾಗಿತ್ತು.

ಆದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಎಂದುಕೊಂಡಂತೆ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ತಂಡಕ್ಕೆ ಶುಭಾರಂಭ ಸಿಗಲಿಲ್ಲ. ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ ತನ್ನ ಮೊದಲನೇ ಪಂದ್ಯದಲ್ಲಿ ಸೋಲುಂಡಿತು. ಕಳೆದ ಆವೃತ್ತಿಯ ಕಳಪೆ ಪ್ರದರ್ಶನ ಮತ್ತು ಈ ಆವೃತ್ತಿಯ ಮೊದಲ ಪಂದ್ಯದಲ್ಲಿಯೇ ಹೀನಾಯ ಸೋಲಿನಿಂದ ಕಂಗೆಟ್ಟಿರುವ ಎಂಎಸ್ ಧೋನಿ ಅವರು ಶುಕ್ರವಾರ ( ಏಪ್ರಿಲ್ 16 ) ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ 200ನೇ ಪಂದ್ಯವನ್ನಾಡಿದ್ದಾರೆ.

 

 

 

ಪಂದ್ಯ ಆರಂಭಕ್ಕೂ ಮುನ್ನವೇ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ಆಟಗಾರ ಶೇನ್ ವ್ಯಾಟ್ಸನ್ ಧೋನಿ ಅವರಿಗೆ ಟ್ವಿಟರ್ ಮೂಲಕ ವಿಶೇಷ ಸಂದೇಶವನ್ನು ಕಳುಹಿಸಿದ್ದಾರೆ. ಈ ಟ್ವೀಟ್ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ 200ನೇ ಪಂದ್ಯ ಪೂರೈಸಿದ ಧೋನಿ ಅವರಿಗೆ ಶೇನ್ ವಾಟ್ಸನ್ ಶುಭಾಶಯವನ್ನು ಕೋರಿದ್ದಾರೆ. ನೀವು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಹೃದಯ ಬಡಿತ ಹಾಗೂ ಕ್ರಿಕೆಟ್‍ನ ಅತ್ಯದ್ಭುತ ಆಟಗಾರರಲ್ಲಿ ನೀವು ಒಬ್ಬರು ಎಂದು ಧೋನಿಗೆ ಶೇನ್ ವ್ಯಾಟ್ಸನ್ ವಿಶೇಷ ಸಂದೇಶವನ್ನು ಟ್ವೀಟ್ ಮಾಡುವ ಮೂಲಕ ಕಳುಹಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...