ಧೋನಿಯನ್ನು ದಾಖಲೆಯನ್ನು ಹಿಂದಿಕ್ಕಿದ ರಿಷಬ್ ಪಂತ್,

0
61

ಟೀಂ ಇಂಡಿಯಾದ ವಿಕೆಟ್ ಕೀಪರ್ ಮತ್ತು ಬ್ಯಾಟ್ಸ್ ಮನ್ ರಿಷಬ್ ಪಂತ್ ಹೊಸ ದಾಖಲೆ ಬರೆದಿದ್ದಾರೆ. ಪಂತ್ ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಟೆಸ್ಟ್ ನ ಎರಡನೇ ಇನ್ನಿಂಗ್ಸ್ ನಲ್ಲಿ ದಾಖಲೆ ಮಾಡಿದ್ದಾರೆ. ಟೆಸ್ಟ್ ಕ್ರಿಕೆಟ್ ನಲ್ಲಿ ವೇಗವಾಗಿ ಸಾವಿರ ರನ್ ಗಳಿಸಿದ ಭಾರತದ ವಿಕೆಟ್ ಕೀಪರ್ ಆಗಿದ್ದಾರೆ.

 


ಉಳಿದಂತೆ ಭಾರತೀಯ ಮಾಜಿ ಕ್ರಿಕೆಟಿಗ ಫಾತೂಕ್ ಇಂಜಿನಿಯರ್ 36 ಇನ್ನಿಂಗ್ಸ್‌, ವೃದ್ಧಿಮಾನ್ ಸಾಹ 37 ನಯನ್ ಮೋಂಗಿಯಾ 39, ಸಯ್ಯದ್ ಕಿರ್ಮಾನಿ 45 ಹಾಗೂ ಕಿರಣ್ ಕೋರೆ 50 ಇನ್ನಿಂಗ್ಸ್‌ನಲ್ಲಿ 1000 ಟೆಸ್ಟ್ ರನ್‌ಗಳನ್ನು ಗಳಿಸಿದ ಸಾಧನೆಯನ್ನು ಮಾಡಿದ್ದಾರೆ.ನಾಲ್ಕನೇ ಟೆಸ್ಟ್‌ಗೂ ಮುನ್ನ ರಿಷಭ್ ಪಂತ್ 1000 ರನ್‌ಗಳ ಮೈಲಿಗಲ್ಲು ತಲುಪಲು 24 ರನ್‌ಗಳ ಅಗತ್ಯವಿತ್ತು. ಆದರೆ ಮೊದಲ ಇನ್ನಿಂಗ್ಸ್‌ನಲ್ಲಿ ಪಂತ್ 23 ರನ್‌ಗಳಿಗೆ ವಿಕೆಟ್ ಒಪ್ಪಿಸಿ ಫೆವಿಲಿಯನ್ ಸೇರಿಕೊಂಡಿದ್ದರು. ಕಡಿಮೆ ಇನ್ನಿಂಗ್ಸ್ ನಲ್ಲಿ ಸಾವಿರ ರನ್ ಗಳಿಸಿದ ಭಾರತೀಯ ವಿಕೆಟ್ ಕೀಪರ್ ಪಟ್ಟಿಯಲ್ಲಿ ಪಂತ್ ಮೊದಲ ಸ್ಥಾನಕ್ಕೇರಿದ್ದಾರೆ. ಪಂತ್, ಧೋನಿ ನಂತ್ರದ ಸ್ಥಾನದಲ್ಲಿ ಫಾರೂಕ್ ಎಂಜಿನಿಯರ್ ಮೂರನೇ ಸ್ಥಾನದಲ್ಲಿದ್ದಾರೆ. ರಿದ್ದಿಮಾನ್ ಸಾಹ್ ನಾಲ್ಕನೇ ಸ್ಥಾನದಲ್ಲಿದ್ದಾರೆ.

LEAVE A REPLY

Please enter your comment!
Please enter your name here