ಧೋನಿ ಟೆಸ್ಟ್ ಬ್ಯಾಟ್ಸ್‌ಮನ್‌ ಅನ್ನೋರು ಈ ದಾಖಲೆ ನೋಡಿ

Date:

ಮಹೇಂದ್ರ ಸಿಂಗ್ ಧೋನಿ, ನಾಯಕನಾಗಿ ಟೀಂ ಇಂಡಿಯಾಗೆ ಹಲವಾರು ದೊಡ್ಡ ಟ್ರೋಫಿಗಳನ್ನು ಗೆಲ್ಲಿಸಿಕೊಟ್ಟಿದ್ದು ಕ್ರಿಕೆಟ್ ಜಗತ್ತು ಕಂಡ ಶ್ರೇಷ್ಠ ನಾಯಕರಲ್ಲೊಬ್ಬರಾಗಿದ್ದಾರೆ. ಕೇವಲ ನಾಯಕನಾಗಿ ಮಾತ್ರವಲ್ಲದೆ ಓರ್ವ ಬ್ಯಾಟ್ಸ್‌ಮನ್‌ ಆಗಿ ಕೂಡ ಮಹೇಂದ್ರ ಸಿಂಗ್ ಧೋನಿ ಹಲವಾರು ದಾಖಲೆಗಳನ್ನು ನಿರ್ಮಿಸಿದ್ದಾರೆ. ಧೋನಿ ನಿರ್ಮಾಣ ಮಾಡಿದ್ದ ಕೆಲ ದಾಖಲೆಗಳನ್ನು ಈಗಿನ ಬ್ಯಾಟ್ಸ್‌ಮನ್‌ಗಳು ಸರಿಗಟ್ಟಿದ್ದರೆ ಇನ್ನೂ ಕೆಲ ವಿಶೇಷ ದಾಖಲೆ ಮತ್ತು ಮೈಲಿಗಲ್ಲುಗಳನ್ನು ಮಾತ್ರ ಮುರಿಯುವ ಪ್ರಯತ್ನವನ್ನು ಯಾರೂ ಮಾಡಿಲ್ಲ.

 

ಅದರಲ್ಲಿಯೂ ಟಿ ಟ್ವೆಂಟಿ ಪಂದ್ಯಗಳಲ್ಲಿ ಮಹೇಂದ್ರ ಸಿಂಗ್ ಧೋನಿ ಎಂತಹ ಆಕ್ರಮಣಕಾರಿ ಆಟಗಾರ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯವೇ. ವಿಶೇಷವಾಗಿ ಡೆತ್ ಓವರ್‌ಗಳಲ್ಲಂತೂ (16ರಿಂದ 20 ಓವರ್‌) ಮಹೇಂದ್ರ ಸಿಂಗ್ ಧೋನಿ ಬ್ಯಾಟಿಂಗ್ ಅಬ್ಬರ ಜೋರಾಗಿರುತ್ತದೆ. ಹೀಗೆ ಟಿ ಟ್ವೆಂಟಿ ಪಂದ್ಯಗಳ ಡೆತ್ ಓವರ್‌ಗಳಲ್ಲಿ ಅಬ್ಬರದ ಬ್ಯಾಟಿಂಗ್ ನಡೆಸುವ ಮಹೇಂದ್ರ ಸಿಂಗ್ ಧೋನಿ ವಿಶೇಷ ದಾಖಲೆಯೊಂದನ್ನು ತಮ್ಮ ಹೆಸರಿನಲ್ಲಿ ಹೊಂದಿದ್ದು ಇನ್ನೂ ಯಾವ ಆಟಗಾರನೂ ಸಹ ಆ ದಾಖಲೆಯನ್ನು ಸರಿಗಟ್ಟಿಲ್ಲ.

ಹೌದು ಅಂತಾರಾಷ್ಟ್ರೀಯ ಟಿ ಟ್ವೆಂಟಿ ಪಂದ್ಯಗಳ ಡೆತ್‌ ಓವರ್‌ಗಳಲ್ಲಿ ಅತಿಹೆಚ್ಚು ರನ್ ಸಿಡಿಸಿರುವ ಆಟಗಾರ ಎಂಬ ದಾಖಲೆಯನ್ನು ಮಹೇಂದ್ರ ಸಿಂಗ್ ಧೋನಿ ತಮ್ಮ ಹೆಸರಿನಲ್ಲಿ ಬರೆದುಕೊಂಡಿದ್ದಾರೆ. ಅಂತಾರಾಷ್ಟ್ರೀಯ ಟಿ ಟ್ವೆಂಟಿ ಪಂದ್ಯಗಳ ಕೊನೆಯ 5 ಓವರ್‌ಗಳಲ್ಲಿ ಎಂಎಸ್ ಧೋನಿ ಇದುವರೆಗೂ 1014 ರನ್ ಗಳಿಸುವ ಮೂಲಕ ಈ ದಾಖಲೆಗೆ ಪಾತ್ರರಾಗಿದ್ದಾರೆ. ಇನ್ನು ಧೋನಿಯನ್ನು ಹೊರತುಪಡಿಸಿ ಅಂತಾರಾಷ್ಟ್ರೀಯ ಟಿ ಟ್ವೆಂಟಿ ಪಂದ್ಯಗಳ ಡೆತ್ ಓವರ್‌ಗಳಲ್ಲಿ ಶೋಯೆಬ್ ಮಲಿಕ್ 862 ರನ್, ಡೇವಿಡ್ ಮಿಲ್ಲರ್ 788 ರನ್, ವಿರಾಟ್ ಕೊಹ್ಲಿ 728 ರನ್ ಹಾಗೂ ಮೊಹಮ್ಮದ್ ನಬಿ 713 ರನ್ ಗಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...