ಧೋನಿ ತಂದೆ ತಾಯಿ ಕೊರೊನಾದಿಂದ ಗುಣಮುಖ

Date:

ಏಪ್ರಿಲ್ 21ರಂದು ಮಹೇಂದ್ರ ಸಿಂಗ್ ಧೋನಿಯವರ ತಂದೆ ಪಾನ್ ಸಿಂಗ್ ಮತ್ತು ತಾಯಿ ದೇವಕಿ ದೇವಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಸೋಂಕು ದೃಢಪಟ್ಟ ಕೂಡಲೇ ಎಂಎಸ್ ಧೋನಿ ಅವರ ತಂದೆ ತಾಯಿಯನ್ನು ರಾಂಚಿಯ ಪಲ್ಸ್ ಸೂಪರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿತ್ತು.

ಇದೀಗ ಎಂ ಎಸ್ ಧೋನಿ ಅವರ ತಂದೆ ತಾಯಿ ಇಬ್ಬರಿಗೂ ಸಹ ಕೊರೊನಾವೈರಸ್ ವರದಿಯಲ್ಲಿ ನೆಗೆಟಿವ್ ಬಂದಿದ್ದು ಇಬ್ಬರೂ ಸಹ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಎಂದು ತಿಳಿಸಲಾಗಿದೆ. ಎಂಎಸ್ ಧೋನಿ ಅವರ ತಂದೆ ತಾಯಿಯ ಆರೋಗ್ಯದ ಕುರಿತು ಮಾತನಾಡಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಕೋಚ್ ಸ್ಟೀಫನ್ ಫ್ಲೆಮಿಂಗ್ ಎಂಎಸ್ ಧೋನಿ ಅವರ ತಂದೆ ತಾಯಿಯ ಆರೋಗ್ಯದ ಮಾಹಿತಿಯನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮ್ಯಾನೇಜ್ಮೆಂಟ್ ಆಗಾಗ ಪಡೆದುಕೊಳ್ಳುತ್ತಿದೆ. ಸದ್ಯ ಅವರಿಬ್ಬರು ಚೇತರಿಕೆ ಕಂಡಿದ್ದು ಆರೋಗ್ಯದಿಂದಿದ್ದಾರೆ. ಮುಂಜಾಗ್ರತೆಯಿಂದ ಇನ್ನೂ ಕೆಲವು ದಿನಗಳ ಕಾಲ ಅವರ ಆರೋಗ್ಯದ ಕುರಿತು ಕಾಳಜಿ ತೆಗೆದುಕೊಳ್ಳುವುದಾಗಿ ಫ್ಲೆಮಿಂಗ್ ತಿಳಿಸಿದರು.

 

ಸದ್ಯ 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮಹೇಂದ್ರ ಸಿಂಗ್ ಧೋನಿ ಬ್ಯುಸಿಯಾಗಿದ್ದು, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮ್ಯಾನೇಜ್‌ಮೆಂಟ್ ಧೋನಿಯವರ ಪೋಷಕರ ಆರೋಗ್ಯದ ಕುರಿತು ಮಾಹಿತಿ ಪಡೆದುಕೊಳ್ಳುತ್ತಿದೆ. ಟೂರ್ನಿಯಲ್ಲಿ ಉತ್ತಮ ಪ್ರದರ್ಶನವನ್ನು ನೀಡುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದ್ದು ಬುಧವಾರ ( ಏಪ್ರಿಲ್ 28 ) ನಡೆಯಲಿರುವ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಚೆನ್ನೈ ಸೆಣಸಾಡಲಿದೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...