ಧೋನಿ ನಿವೃತ್ತಿ ಬಗ್ಗೆ ದೊಡ್ಡ ಘೋಷಣೆ ಮಾಡಿದ ಸಿ ಎಸ್ ಕೆ ತಂಡದ ಸಿಇಒ

Date:

 

2021ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೊದಲ ಪಂದ್ಯ ಇಂದು ( ಏಪ್ರಿಲ್ 9 ) ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಸೆಣಸಾಡಲಿವೆ. ಕಳೆದ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ನೀಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಈ ಬಾರಿ ಕಮ್ ಬ್ಯಾಕ್ ಮಾಡುವ ತವಕದಲ್ಲಿದೆ. ಈ ಬಾರಿ ಹೇಗಾದರೂ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮೇಲೆತ್ತಲೇಬೇಕು ಎಂದು ಪಣ ತೊಟ್ಟಿರುವ ಧೋನಿ ಕಠಿಣಾಭ್ಯಾಸದಲ್ಲಿ ತೊಡಗಿದ್ದಾರೆ.

 

ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಈ ಬಾರಿಯ ಐಪಿಎಲ್ ಧೋನಿ ಪಾಲಿಗೆ ಕೊನೆಯ ಐಪಿಎಲ್ ಟೂರ್ನಿ ಆಗಲಿದೆಯಾ ಎಂಬ ಚರ್ಚೆಗಳು ಆರಂಭವಾಗಿವೆ. 2020ರ ಆಗಸ್ಟ್ 15ರಂದು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದ ಧೋನಿ ಪಾಲಿಗೆ ಈ ವರ್ಷದ ಐಪಿಎಲ್ ಕೊನೆಯ ಐಪಿಎಲ್ ಆಗಲಿದೆಯಾ ಎಂಬ ಪ್ರಶ್ನೆಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸಿಇಒ ಕಾಶಿ ವಿಶ್ವನಾಥನ್ ಮುಕ್ತವಾಗಿ ಉತ್ತರ ನೀಡಿದ್ದಾರೆ.

ಈ ವರ್ಷದ ಐಪಿಎಲ್ ಮಹೇಂದ್ರ ಸಿಂಗ್ ಧೋನಿ ಪಾಲಿಗೆ ಕೊನೆಯ ಐಪಿಎಲ್ ಆಗಲಿದೆ ಎಂದು ನನಗೆ ಅನಿಸುತ್ತಿಲ್ಲ, ಇದು ನನ್ನ ವೈಯಕ್ತಿಕ ಅಭಿಪ್ರಾಯ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಬೇರೆ ನಾಯಕರ ಹುಡುಕಾಟದಲ್ಲಿಯೂ ನಾವು ಇಲ್ಲ ಎಂದು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸಿಇಒ ಕಾಶಿ ವಿಶ್ವನಾಥನ್ ತಿಳಿಸಿದರು. ಕಾಶಿ ವಿಶ್ವನಾಥನ್ ಅವರ ಈ ಹೇಳಿಕೆಯನ್ನು ಗಮನಿಸಿದರೆ ಮಹೇಂದ್ರ ಸಿಂಗ್ ಧೋನಿ ಅವರು ಮುಂದಿನ ಐಪಿಎಲ್ ಟೂರ್ನಿಯಲ್ಲಿಯೂ ಭಾಗವಹಿಸುವ ಸಾಧ್ಯತೆಗಳಿವೆ.

 

Share post:

Subscribe

spot_imgspot_img

Popular

More like this
Related

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್ ರನ್ ಪ್ರಕರಣ!

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್...

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ...

ಕರ್ನೂಲ್ ನಲ್ಲಿ ಖಾಸಗಿ ಬಸ್ ಹೊತ್ತಿ ಉರಿದು 10ಕ್ಕೂ ಹೆಚ್ಚು ಮಂದಿ ಸಜೀವ ದಹನ

ಕರ್ನೂಲ್ ನಲ್ಲಿ ಖಾಸಗಿ ಬಸ್ ಹೊತ್ತಿ ಉರಿದು 10ಕ್ಕೂ ಹೆಚ್ಚು ಮಂದಿ...

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...