ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯವನ್ನು ಭಾರತ ಭರ್ಜರಿಯಾಗಿ ಗೆದ್ದು ಬೀಗಿದೆ. 5ದಿನಗಳ ಟೆಸ್ಟ್ ಪಂದ್ಯವನ್ನು ಕೇವಲ ಎರಡೇ ದಿನಗಳಲ್ಲಿ ಮುಗಿಸುವುದರ ಮೂಲಕ ಅತಿವೇಗವಾಗಿ ಪಂದ್ಯವನ್ನ ಗೆದ್ದುಕೊಂಡಿದೆ.
ಇನ್ನೂ ಈ ಗೆಲುವಿನ ಮೂಲಕ ನಾಯಕ ವಿರಾಟ್ ಕೊಹ್ಲಿ ಅವರ ಭರ್ಜರಿ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಹೌದು ನಾಯಕನಾಗಿ ಅತಿ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಗೆಲ್ಲುವ ಮೂಲಕ ವಿರಾಟ್ ಕೊಹ್ಲಿ ಅವರು ನೂತನ ದಾಖಲೆ ಬರೆದಿದ್ದಾರೆ.
ಈ ದಾಖಲೆ ಬರೆಯುವುದರ ಮೂಲಕ ಮಹೇಂದ್ರ ಸಿಂಗ್ ಧೋನಿ ಅವರ ದಾಖಲೆಯನ್ನು ವಿರಾಟ್ ಕೊಹ್ಲಿ ಅವರು ಧೂಳಿಪಟ ಮಾಡಿದ್ದಾರೆ. ಟೀಮ್ ಇಂಡಿಯಾ ಮಹೇಂದ್ರ ಸಿಂಗ್ ಧೋನಿ ಅವರ ನಾಯಕತ್ವದಲ್ಲಿ 30 ಟೆಸ್ಟ್ ಪಂದ್ಯಗಳನ್ನು ಆಡಿ 21 ಪಂದ್ಯಗಳನ್ನು ಗೆದ್ದಿತ್ತು. ಇನ್ನೂ ಇಂದಿನವರೆಗೂ ಸಹ ಇದು ದೊಡ್ಡ ದಾಖಲೆಯಾಗಿತ್ತು.
ಆದರೆ ಇದೀಗ ವಿರಾಟ್ ಕೊಹ್ಲಿ ಅವರು ಆ ದಾಖಲೆಯನ್ನ ಸರಿಗಟ್ಟಿದ್ದಾರೆ. ಹೌದು ವಿರಾಟ್ ಕೊಹ್ಲಿ ಅವರ ನಾಯಕತ್ವದಲ್ಲಿ ಟೀಮ್ ಇಂಡಿಯಾ ಒಟ್ಟು 29 ಟೆಸ್ಟ್ ಪಂದ್ಯಗಳನ್ನು ಆಡಿ ಅದರಲ್ಲಿ 22 ಪಂದ್ಯಗಳನ್ನು ಗೆದ್ದು ಬೀಗಿದೆ. ಈ ಮೂಲಕ ಧೋನಿ ಅವರ ದಾಖಲೆಯನ್ನು ವಿರಾಟ್ ಅಳಿಸಿಹಾಕಿದ್ದು ಮೋಸ್ಟ್ ಸಕ್ಸಸ್ ಫುಲ್ ಟೆಸ್ಟ್ ಕ್ಯಾಪ್ಟನ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.