ಮುಖ್ಯಮಂತ್ರಿ ಯಡಿಯೂರಪ್ಪನವರು ಧ್ವಜಾರೋಹಣ ನಡೆಸಿದ ನಂತರ ಮಾತನಾಡಿದರು ಸ್ವಾತಂತ್ರ್ಯೋತ್ಸವದ ದಿನವಾದ ಇಂದು ದೀಕ್ಷೆ ತೆಗೆದುಕೊಳ್ಳೋಣ. ಪ್ರಕೃತಿಯ ಮುನಿಸು, ಪರಿಹಾರಕ್ಕೆ ಆದ್ಯತೆ ನೀಡಲಾಗಿದೆ. ಅತಿವೃಷ್ಟಿ, ಅನಾವೃಷ್ಟಿಗೆ ಸಿಲುಕಿ ರಾಜ್ಯ ಸಂಕಷ್ಟದಲ್ಲಿದೆ. ಇದನ್ನು ನಿಭಾಯಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.
ರಾಜ್ಯದ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ರಾಜ್ಯದಲ್ಲಿನ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗವಕಾಶ ನೀಡಲು ರಾಜ್ಯ ಸರ್ಕಾರ ಬದ್ಧವಾಗಿದೆ. ಹಾಗೇ ಅನ್ನದಾತರ ಹಿತರಕ್ಷಣೆಗೆ ನಮ್ಮ ಸರ್ಕಾರ ಮೊದಲ ಆದ್ಯತೆ ನೀಡಲಿದೆ.ನೇಕಾರರು, ಮೀನುಗಾರರ ಸಾಲಮನ್ನಾ ಮಾಡಿದ್ದೇವೆ. ರಾಜ್ಯದಲ್ಲಿ ಶೇ.32ರಷ್ಟು ನೀರಾವರಿ ಸೌಲಭ್ಯವಿದೆ. ನೀರಾವರಿ ಸೌಲಭ್ಯ ಹೆಚ್ಚಿಸಲು ಸರ್ಕಾರ ಆದ್ಯತೆ ನೀಡಲಿದೆ