No menu items!
19.6 C
Munich
Friday, May 1, 2026

ನಟಿಯ ಖಾಸಗಿ ವಿಡಿಯೋ ರೆಕಾರ್ಡ್ ಮಾಡಿ ಬ್ಲ್ಯಾಕ್‌ಮೇಲ್: ಸೈಬರ್ ಕ್ರೈಂ ಪೊಲೀಸರಿಗೆ ದೂರು

Must read

ನಟಿಯ ಖಾಸಗಿ ವಿಡಿಯೋ ರೆಕಾರ್ಡ್ ಮಾಡಿ ಬ್ಲ್ಯಾಕ್‌ಮೇಲ್: ಸೈಬರ್ ಕ್ರೈಂ ಪೊಲೀಸರಿಗೆ ದೂರು

ಬೆಂಗಳೂರು: ಕನ್ನಡದ ನಟಿ ಹಾಗೂ ರಿಯಾಲಿಟಿ ಶೋ ಸ್ಪರ್ಧಿಯ ಖಾಸಗಿ ವಿಡಿಯೋ ರೆಕಾರ್ಡ್ ಮಾಡಿ ಬ್ಲ್ಯಾಕ್‌ಮೇಲ್ ಮಾಡಿದ ಆರೋಪ ಕೇಳಿಬಂದಿದೆ. ಇತ್ತೀಚೆಗೆ ನಡೆದ ಮಹಿಳಾ ಕ್ರಿಕೆಟ್ ಟೂರ್ನಿಯ ವೇಳೆ ಈ ಘಟನೆ ನಡೆದಿದ್ದು, ಸಂತ್ರಸ್ತೆ ಈ ಸಂಬಂಧ ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಕೋರಮಂಗಲ ಇಂಡೋರ್ ಸ್ಟೇಡಿಯಂನಲ್ಲಿ ನಡೆದ ಕ್ರಿಕೆಟ್ ಟೂರ್ನಿಯ ಎರಡನೇ ದಿನ ವಾಶ್ ರೂಂಗೆ ತೆರಳಿದ್ದ ವೇಳೆ ಅಪರಿಚಿತ ವ್ಯಕ್ತಿಯೊಬ್ಬರು ವಿಡಿಯೋ ರೆಕಾರ್ಡ್ ಮಾಡಿದ್ದು ಹಾಗೂ ಫೋಟೋ ತೆಗೆದಿರುವ ಆರೋಪ ಕೇಳಿಬಂದಿದೆ. ಬ್ಲ್ಯಾಕ್‌ಮೇಲ್ ಮಾಡುವ ಉದ್ದೇಶದಿಂದಲೇ ಈ ಕೃತ್ಯ ನಡೆಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸಾಮಾನ್ಯವಾಗಿ ಇಂತಹ ಪ್ರಕರಣಗಳಲ್ಲಿ ಆರೋಪಿಗಳು ನೇರವಾಗಿ ಸಂತ್ರಸ್ತರಿಗೆ ವಿಡಿಯೋ ಕಳುಹಿಸಿ ಹಣಕ್ಕೆ ಬೇಡಿಕೆ ಇಡುವರು. ಆದರೆ ಈ ಪ್ರಕರಣದಲ್ಲಿ ಅಪರಿಚಿತ ವ್ಯಕ್ತಿ ವಿಡಿಯೋವನ್ನು ಸಂತ್ರಸ್ತೆಯ ಆಪ್ತ ಸ್ನೇಹಿತೆಗೆ ಕಳುಹಿಸಿದ್ದಾನೆ ಎನ್ನಲಾಗಿದೆ. ‘Swan.3704722’ ಎಂಬ ಇನ್‌ಸ್ಟಾಗ್ರಾಂ ಖಾತೆಯಿಂದ ಸಂದೇಶ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.

‘ವಿಡಿಯೋ ವೈರಲ್ ಮಾಡಬಾರದೆಂದರೆ ಹಣ ನೀಡಬೇಕು’ ಎಂದು ಬೆದರಿಕೆ ಹಾಕಿದ್ದು, ವೀಡಿಯೋ ಕಾಲ್ ಮೂಲಕವೂ ಒತ್ತಡ ತಂದಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿ ಕಳುಹಿಸಿದ ಫೋಟೋ ಹಾಗೂ ವಿಡಿಯೋಗಳನ್ನು ಸಾಕ್ಷ್ಯವಾಗಿ ನೀಡಿ ನಟಿ ದೂರು ನೀಡಿದ್ದಾರೆ. ಈ ಸಂಬಂಧ ಸೈಬರ್ ಕ್ರೈಂ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಪತ್ತೆಗೆ ಶೋಧ ನಡೆಸುತ್ತಿದ್ದಾರೆ.

- Advertisement -spot_img

More articles

- Advertisement -spot_img

Latest article