No menu items!
22.2 C
Munich
Tuesday, September 1, 2026

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನ !

Must read

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ʼರನ್ನು ಬಂಧನ ಮಾಡಲಾಗಿದೆ. ಹೌದು ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆಗಿದ್ದರು. ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎನ್ನಲಾಗಿದ್ದು, ಈ ಪ್ರಕರಣ ಸಂಬಂಧ ಮೈಸೂರಿನ ಫಾರ್ಮ್ ಹೌಸ್ ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ʼರನ್ನು ವಶಕ್ಕೆ ಪಡೆಯಲಾಗಿದೆ.
ನಟ ದರ್ಶನ್ ಜೊತೆ ಪವಿತ್ರಾ ಗೌಡ ತುಂಬಾ ಆಪ್ತವಾಗಿದ್ದಾರೆ. ದರ್ಶನ್ ಜೊತೆ ಇರೋ ಫೋಟೋಗಳನ್ನು ಪವಿತ್ರಾ ಗೌಡ ಹಂಚಿಕೊಂಡಿದ್ದರು. ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬುವವರು ಅಶ್ಲೀಲ ಮೇಸೆಜ್ ಮಾಡಿದ್ದರು. ಕಾಮಾಕ್ಷಿಪಾಳ್ಯದಲ್ಲಿ ರೇಣುಕಾಸ್ವಾಮಿಯ ಕೊಲೆ ಆಗಿತ್ತು. ದರ್ಶನ್ ಸೂಚನೆ ಮೇಲೆ ಕೊಲೆ ಮಾಡಿದ್ದಾಗಿ ನಾಲ್ವರು ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಘಟನೆ ವೇಳೆ ಸ್ಥಳದಲ್ಲಿ ದರ್ಶನ್ ಕೂಡ ಇದ್ದರು ಎನ್ನಲಾಗಿದೆ.

- Advertisement -spot_img

More articles

- Advertisement -spot_img

Latest article