ಬೆಂಗಳೂರು: ನಟ ದರ್ಶನ್ ಅರೆಸ್ಟ್ ಆಗಿರುವ ಸಂಬಂಧ ಪೊಲೀಸ್ ಆಯುಕ್ತ ಬಿ ದಯಾನಂದ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ‘ಜೂನ್ 9 ರಂದು ಭಾನುವಾರದಂದು ಕಾಮಾಕ್ಷಿಪಾಳ್ಯದಲ್ಲಿ ಅಪರಿಚಿತ ಶವವೊಂದು ಸಿಕ್ಕಿತ್ತು. ಆತನ ದೇಹದ ಮೇಲೆ ಇದ್ದ ಗಾಯಗಳನ್ನು ಗಮನಿಸಿ ಕಾಮಾಕ್ಷಿಪಾಳ್ಯದ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದೆವು.
ಅದಾದ ಬಳಿಕ ಸಿಸಿಟಿವಿ ಹಾಗೂ ಇತರೆ ತಾಂತ್ರಿಕ ಆಧಾರದ ಮೇಲೆ ವ್ಯಕ್ತಿಯ ಗುರುತು ಪರಿಚಯ ಗೊತ್ತಾಗಿದ್ದು, ಆತ ಚಿತ್ರದುರ್ಗದ ವಾಸಿ ರೇಣುಕಾ ಸ್ವಾಮಿ ಎಂಬ ಗುರುತು ಪತ್ತೆಯಾಯ್ತು ಎಂದಿದ್ದಾರೆ. ಮುಂದಿನ ತನಿಖೆಯಲ್ಲಿ ಕನ್ನಡ ಚಿತ್ರರಂಗದ ನಟ ಹಾಗೂ ಆತನ ಸಹಚರರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.
ರೇಣುಕಾ ಸ್ವಾಮಿ ದರ್ಶನ್ ಪತ್ನಿಗೆ ಅವಾಚ್ಯ ಸಂದೇಶಗಳನ್ನು ಕಳಿಸಿದ್ದಾನೆ ಎಂಬ ಕಾರಣಕ್ಕೆ ಆತನ ಕೊಲೆ ಮಾಡಲಾಗಿದೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಪೊಲೀಸ್ ಆಯುಕ್ತ ಬಿ ದಯಾನಂದ ಹೇಳಿದರು. ಈ ವರೆಗೆ ಸುಮಾರು 10ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆಯಲಾಗಿದ್ದು, ಪ್ರಶ್ನೋತ್ತರ ನಡೆಯುತ್ತಿದೆ. ಮುಂದಿನ ಕಾನೂನು ಕ್ರಮಗಳನ್ನು ನಡೆಸಲಾಗುತ್ತದೆ. ತನಿಖೆಯ ಆರಂಭಿಕ ಹಂತದಲ್ಲಿ ಇರುವ ಕಾರಣ ಪ್ರಕರಣದ ಬಗೆಗೆ ಈಗ ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಲು ಆಗುವುದಿಲ್ಲ ಎಂದಿದ್ದಾರೆ.
ನಟ ದರ್ಶನ್ ಅರೆಸ್ಟ್: ಪೊಲೀಸ್ ಆಯುಕ್ತ ಬಿ ದಯಾನಂದ ಮಾಹಿತಿ !
Date: