ನಟ ದರ್ಶನ್ ಗೆ ಮತ್ತೊಂದು ಶಾಕ್: ಗನ್ ಲೈಸೆನ್ಸ್ ರದ್ದು !
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿತರಾಗಿರುವ ನಟ ದರ್ಶನ್ ಜಾಮೀನು ಪಡೆದು ಸದ್ಯ ಹೊರಗಿದ್ದಾರೆ. ಇದೀಗ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಮುಗಿಯುವವರೆಗೆ ಬಂದೂಕನ್ನು ಇರಿಸಿಕೊಳ್ಳುವಂತಿಲ್ಲ ಎಂದು ಹೇಳಿ ಲೈಸೆನ್ಸ್ ಅನ್ನು ತಾತ್ಕಾಲಿಕವಾಗಿ ರದ್ದು ಮಾಡಿದೆ. ಲೈಸೆನ್ಸ್ ರದ್ದಾಗಿರುವ ಕಾರಣ, ದರ್ಶನ್ ಈ ಕೂಡಲೇ ತಮ್ಮ ಬಂದೂಕನ್ನು ಸ್ಥಳೀಯ ಪೊಲೀಸ್ ಠಾಣೆಗೆ ಸರೆಂಡರ್ ಮಾಡಬೇಕಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ಗೆ ಹೈಕೋರ್ಟ್ ನಿಯಮಿತ ಜಾಮೀನು ನೀಡಿದೆ. ದರ್ಶನ್ ಮಾತ್ರವಲ್ಲದೆ ಪ್ರಕರಣದ ಎಲ್ಲ ಆರೋಪಿಗಳಿಗೆ ನೀಡಿರುವ ಜಾಮೀನು ರದ್ದು ಮಾಡಲಾಗಿದೆ. ಆದರೆ ಪೊಲೀಸರು, ದರ್ಶನ್ಗೆ ನೀಡಿರುವ ಜಾಮೀನು ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಇನ್ನು ನಟ ದರ್ಶನ್,
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆ ವೇಳೆ ತಮ್ಮಿಂದ ಪೊಲೀಸರು ವಶಪಡಿಸಿಕೊಂಡಿರುವ 37 ಲಕ್ಷ ರೂಪಾಯಿ ಹಣವನ್ನು ಮರಳಿಸುವಂತೆ ನ್ಯಾಯಾಲಯದಲ್ಲಿ ಅರ್ಜಿ ಹಾಕಿದ್ದಾರೆ. ಪೊಲೀಸರು ವಶಪಡಿಸಿಕೊಂಡಿರುವ 37 ಲಕ್ಷ ರೂಪಾಯಿ ಹಣ ತಮ್ಮದಾಗಿದ್ದು, ಈ ಹಿಂದೆ ವ್ಯಕ್ತಿಯೊಬ್ಬರಿಗೆ ಆ ಮೊತ್ತವನ್ನು ಸಾಲವಾಗಿ ನೀಡಿದ್ದು, ಆ ವ್ಯಕ್ತಿ ಹಣ ಮರಳಿಸಿದ್ದರು, ಅದನ್ನು ಮನೆಯಲ್ಲಿ ಇರಿಸಿಕೊಂಡಿದ್ದೆ ಎಂದು ದರ್ಶನ್ ಹೇಳಿದ್ದಾರೆ.






