ನಟ ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳ​ ಜಾಮೀನು ರದ್ದು: ಸುಪ್ರೀಂ ​ ಮಹತ್ವದ ತೀರ್ಪು

Date:

ನಟ ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳ​ ಜಾಮೀನು ರದ್ದು: ಸುಪ್ರೀಂ ​ ಮಹತ್ವದ ತೀರ್ಪು

 

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇತರರಿಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು. ವಿಚಾರಣೆ ಬಳಿಕ ಇಂದು ತೀರ್ಪು ಹೊರಬಿದ್ದು, ದರ್ಶನ್ ಸೇರಿದಂತೆ ಆರೋಪಿಗಳ ಜಾಮೀನು ರದ್ದಾಗಿದೆ.

ಸುಪ್ರೀಂಕೋರ್ಟ್​​ನ ನ್ಯಾ.ಜೆ.ಬಿ.ಪರ್ದಿವಾಲಾ,.ಆರ್.ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠದಿಂದ ಈ ಆದೇಶ ಬಂದಿದೆ. ಇದರಿಂದ ದರ್ಶನ್ ಜೈಲು ಸೇರಬೇಕಾದ ಪರಿಸ್ಥಿತಿ ಬಂದಿದೆ. ದರ್ಶನ್ ವೃತ್ತಿ ಜೀವನದ ಮೇಲೆ ಈ ತೀರ್ಪು ತುಂಬಾನೇ ಪ್ರಭಾವ ಬೀರಲಿದೆ. ‘ಹೈಕೋರ್ಟ್ ಆದೇಶದಲ್ಲಿ ದೋಷವಿದೆ. ತಾಂತ್ರಿಕ ಕಾರಣಗಳಿಂದ ಜಾಮೀನು ನೀಡಿದ್ದಾರೆ’ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ.

ಕಳೆದ ವರ್ಷ ಜೂನ್​ 11ರಂದು ದರ್ಶನ್ ಬಂಧನಕ್ಕೆ ಒಳಗಾದರು. ಆ ಬಳಿಕ ಅವರು ನಾಲ್ಕು ತಿಂಗಳಿಗೂ ಅಧಿಕ ಸಮಯ ಅವರು ಜೈಲಿನಲ್ಲಿ ಇರಬೇಕಾದ ಸ್ಥಿತಿ ಬಂದೊದಗಿತ್ತು. ಆ ಬಳಿಕ ಬೆನ್ನು ನೋವಿನ ಕಾರಣ ನೀಡಿ ಜೈಲಿನಿಂದ ಹೊರ ಬಂದರು. ಡಿಸೆಂಬರ್​ನಲ್ಲಿ ಅವರಿಗೆ ಸಂಪೂರ್ಣ ಜಾಮೀನು ದೊರೆಯಿತು. ಇದನ್ನು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್​ ಬಳಿ ಪ್ರಶ್ನೆ ಮಾಡಿತ್ತು.

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ ಬೆಂಗಳೂರು: ಮುಖ್ಯಮಂತ್ರಿ...

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ ಬೇಡ – ಡಿ.ಕೆ. ಶಿವಕುಮಾರ್

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ...

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...