ನಟ ಪುನೀತ್ ರಾಜ್ ಕುಮಾರ್ ಅಸ್ವಸ್ಥ; ಆಸ್ಪತ್ರೆಗೆ ದಾಖಲು!

Must read

ನಟ ಪುನೀತ್‌ ರಾಜಕುಮಾರ್‌ಗೆ ಆಸ್ವಸ್ಥಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಂದು ಬೆಳಗ್ಗೆ ಅವರು ಜಿಮ್‌ನಲ್ಲಿ ವರ್ಕ್‌ಔಟ್‌ ಮಾಡುವ ವೇಳೆಯಲ್ಲಿ ಹೃದಯ ಸಂಬಂಧಿ ಸಮಸ್ಯೆಕಾಣಿಸಿಕೊಂಡ ಹಿನ್ನಲೆಯಲ್ಲಿ ಕೂಡಲೇ ಅವರು ಆಸ್ಪತ್ರೆಗೆ ತೆರಳಿದ್ದಾರೆ ಎನ್ನಲಾಗಿದೆ.

ಸದ್ಯದ ಮಾಹಿತಿ ಪ್ರಕಾರ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಹಿರಿಯ ವೈದ್ಯರು ಹಾಗೂ ಕುಟುಂಬಸ್ಥರು ಅವರೊಟ್ಟಿಗೆ ಇದ್ದಾರೆ. ಪುನೀತ್ ರಾಜ್ ಕುಮಾರ್ ಯಾವ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬುದರ ಕುರಿತ ಸ್ಪಷ್ಟ ಮಾಹಿತಿ ಇನ್ನೂ ಹೊರಬೀಳಬೇಕಿದೆ. ಆದರೆ ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಚಿಂತೆಗೀಡಾಗಬೇಕಾದಂತಹ ದೊಡ್ಡ ಸಮಸ್ಯೆ ಏನೂ ಇಲ್ಲ ಎಂಬುದು ಪುನೀತ್ ರಾಜ್ ಕುಮಾರ್ ಆಪ್ತ ವಲಯದಿಂದ ಕೇಳಿಬಂದಿದೆ.

- Advertisement -spot_img

More articles

- Advertisement -spot_img

Latest article