ಬೆಂಗಳೂರು : ಕನ್ನಡ ಚಿತ್ರರಂಗದ ಹಾಸ್ಯನಟ ಬುಲೆಟ್ ಪ್ರಕಾಶ್ ಇಂದು ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿನ ಪೋರ್ಟೀಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಐದು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು.
ಲಿವರ್ ಮತ್ತು ಕಿಡ್ನಿ ವೈಫಲ್ಯದಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಸುಮಾರು 300 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಅವರು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಆತ್ಮೀಯ ಗೆಳೆಯರಲ್ಲೊಬ್ಬರಾಗಿದ್ದರು.
ದರ್ಶನ್ ಸಿನಿಮಾಕ್ಕೆ ತಾನು ಬಂಡವಾಳ ಹಾಕಬೇಕು. ಮಗನನ್ನು ಹೀರೋ ಮಾಡಬೇಕು. ತಾನು ನಿರ್ಮಾಪಕನಾಗಬೇಕು ಹೀಗೆ ಸಾಕಷ್ಟು ಕನಸುಗಳನ್ನು ಕಂಡಿದ್ದರು. ಬಹು ಬೇಡಿಕೆಯ ಹಾಸ್ಯನಟರಾಗಿದ್ದ ಅವರೀಗ ಕೇವಲ 42ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ.