No menu items!
14.7 C
Munich
Saturday, July 25, 2026

ನಟ ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

Must read

ನಟ ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಮೆರಿಕದಲ್ಲಿ ಚಿಕಿತ್ಸೆ ಮುಗಿಸಿಕೊಂಡು ಒಂದು ತಿಂಗಳ ನಂತರ ನಿನ್ನೆ ನಟ ಶಿವರಾಜ್ ಕುಮಾರ್ ಅವರು ಬೆಂಗಳೂರಿಗೆ ವಾಪಸ್ ಬಂದಿದ್ದರು. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಗವಾರದಲ್ಲಿನ ನಿವಾಸಕ್ಕೆ ಭೇಟಿ ನೀಡಿ ನಟ ಶಿವರಾಜ್ ಕುಮಾರ್ ಅವರ ಆರೋಗ್ಯ ವಿಚಾರಿಸಿದ್ದಾರೆ.
ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಶಿವರಾಜ್ ಕುಮಾರ್ ಅವರ ಶಸ್ತ್ರಚಿಕಿತ್ಸೆಯ ನಂತರ ಹಿಂತಿರುಗಿ ಬಂದ ನಂತರ ಅವರ ಆರೋಗ್ಯವನ್ನು ವಿಚಾರಿಸಲು ಇಂದು ಭೇಟಿ ಮಾಡಿದ್ದೇನೆ.
ಅವರ ಶಸ್ತ್ರ ಚಿಕಿತ್ಸೆಯ ಮರುದಿನವೇ ಅವರಿಗೆ ಕರೆಯಾಡಿ ಆರೋಗ್ಯ ವಿಚಾರಿಸಿದಾಗ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು ತೊಂದರೆ ಇಲ್ಲ ಎಂದು ತಿಳಿಸಿದ್ದರು. ಮುಂದಿನ ತಿಂಗಳಿನಿಂದ ಚಿತ್ರೀಕರಣಕ್ಕೆ ತೆರಳುವುದಾಗಿ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ತಿಳಿಸಿದರು.

- Advertisement -spot_img

More articles

- Advertisement -spot_img

Latest article