ನಟ ಸೂರ್ಯ ಕುಟುಂಬಕ್ಕೆ ಸಂಕಷ್ಟ

Date:

‘ಜೈಭೀಮ್’ ತಮಿಳು ಚಿತ್ರ ವಿವಾದ ಹಿನ್ನೆಲೆಯಲ್ಲಿ ನಟ ಸೂರ್ಯ ಅವರ ನಿವಾಸಕ್ಕೆ ಪೊಲೀಸರು ಭದ್ರತೆಯನ್ನು ಹೆಚ್ಚಿಸಿದ್ದಾರೆ. ವನ್ನಿಯಾರ್ ಸಮುದಾಯಕ್ಕೆ ಅಪಮಾನ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಸೂರ್ಯನಿಗೆ ಹೊಡೆದರೆ ಒಂದು ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಣೆ ಮಾಡಲಾಗಿತ್ತು. ಹೀಗಾಗಿ ನಟ ಸೂರ್ಯ ನಿವಾಸಕ್ಕೆ ಭದ್ರತೆಯನ್ನು ಹೆಚ್ಚಳ ಮಾಡಲಾಗಿದೆ.

ನಟ ಸೂರ್ಯ ‘ಜೈ ಭೀಮ್’ ಚಿತ್ರದ ಕಾರಣದಿಂದ ಸಂಕಷ್ಟ ಎದುರಿಸುತ್ತಿದ್ದಾರೆ. ಇತ್ತೀಚೆಗೆ ಅವರ ಚಿತ್ರ ‘ಜೈ ಭೀಮ್’ OTT ಪ್ಲಾಟ್‌ಫಾರ್ಮ್ ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಬಿಡುಗಡೆಯಾಯಿತು. ಚಿತ್ರದಲ್ಲಿ ಸೂರ್ಯ ಲಾಯರ್ ಚಂದ್ರು ಪಾತ್ರದಲ್ಲಿ ನಟಿಸಿದ್ದಾರೆ. ‘ಜೈ ಭೀಮ್’ ಸಿನಿಮಾ ಜಾತಿಯ ಆಧಾರದ ಮೇಲೆ ನಡೆಯುತ್ತಿರುವ ತಾರತಮ್ಯದ ಬಗ್ಗೆ ಹೇಳುತ್ತದೆ. ಈ ಚಿತ್ರದ ವಿರುದ್ಧ ವನ್ನಿಯಾರ್ ಸಮುದಾಯ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದೆ. ಹೀಗಾಗಿ ಸೂರ್ಯ ಮನೆಗೆ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.

ವನ್ನಿಯಾರ್ ಸಂಗಮ್ ರಾಜ್ಯಾಧ್ಯಕ್ಷ ‘ಜೈ ಭೀಮ್’ ಚಿತ್ರದ ನಟ ಸೂರ್ಯ, ನಟಿ ಜ್ಯೋತಿಕಾ, ಅಮೆಜಾನ್ ಪ್ರೈಮ್ ವಿಡಿಯೋ ಮತ್ತು ಚಿತ್ರದ ನಿರ್ದೇಶಕ ಟಿ.ಜೆ.ಜ್ಞಾನವೇಲ್ ಅವರಿಗೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ಈ ನೋಟಿಸ್‌ನಲ್ಲಿ ಚಿತ್ರದ ಎಲ್ಲಾ ನಟರು ಮತ್ತು ನಿರ್ಮಾಪಕರು ವನ್ನಿಯಾರ್ ಸಮುದಾಯದ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...