No menu items!
17.9 C
Munich
Saturday, August 1, 2026

ನಡುರಸ್ತೆಯಲ್ಲೇ ನಟ ದುನಿಯಾ ವಿಜಯ್ ಅರೆಸ್ಟ್..!

Must read

ಬೆಂಗಳೂರಿನ ವಿನೋವಾ ನಗರದಲ್ಲಿ ನಡುರಸ್ತೆಯಲ್ಲೇ ಪೊಲೀಸರು ದುನಿಯಾ ವಿಜಯ್ ಕೈಗೆ ಬೇಡಿ ತೋಡಿಸಿಕೊಂಡು ಕರೆದುಕೊಂಡು ಹೋಗಿದ್ದಾರೆ. ಹೌದು ನಟ ದುನಿಯಾ ವಿಜಯ್ ಅರೆಸ್ಟ್ ಆಗಿದ್ದಾರೆ. ಬೆಂಗಳೂರಿನ ವಿನೋವಾ ರಸ್ತೆಯಲ್ಲಿ ವಿಜಯ್ ಕಂಡು ಬಹುತೇಕರು ಗಾಬರಿಗೊಂಡಿದ್ದರು. ವಿಜಯ್ ಮೈ ತುಂಬಾ ರಕ್ತ ಬೇರೆ ಹರಿದಿದ್ದರಿಂದ ಏನಾಯಿತು ಎಂದೆಲ್ಲ ವಿಚಾರಿಸಿದ್ದರು.

ಆಮೇಲೆ ಅದು ಶೂಟಿಂಗ್ ಸನ್ನಿವೇಶ ಎಂದು ಗೊತ್ತಾಗಿ ನಿಟ್ಟುಸಿರಿಟ್ಟರು.
ಹೌದು, ದುನಿಯಾ ವಿಜಯ್ ನಟಿಸಿ, ನಿರ್ದೇಶನ ಮಾಡುತ್ತಿರುವ ಭೀಮ ಸಿನಿಮಾದ ಕೊನೆಯ ಹಂತದ ಚಿತ್ರೀಕರಣ ನಡೆಯುತ್ತಿದೆ. ಅದರಲ್ಲೂ ಕ್ಲೈಮ್ಯಾಕ್ಸ್ ದೃಶ್ಯವನ್ನು ವಿಜಯ್ ಶೂಟ್ ಮಾಡುತ್ತಿದ್ದಾರೆ. ನಡು ರಸ್ತೆಯಲ್ಲಿ ವಿಜಯ್ ಅವರನ್ನು ಅರೆಸ್ಟ್ ಮಾಡಿಕೊಂಡು ಹೋಗುವ ದೃಶ್ಯ ಅದಾಗಿದೆ. ಈ ಮೂಲಕ ಭೀಮ ಸಿನಿಮಾದ ಕ್ಲೈಮ್ಯಾಕ್ಸ್ ಏನಾಗಿರಲಿದೆ ಎನ್ನುವ ಸಣ್ಣದೊಂದು ಸುಳಿವೂ ಸಿಕ್ಕಿದೆ.

- Advertisement -spot_img

More articles

- Advertisement -spot_img

Latest article