ನನಗೂ ಸಚಿವ ಸ್ಥಾನ ಬೇಕು ಎಂದ ಹೆಚ್.ವಿಶ್ವನಾಥ್

Date:

ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಹೊಸ ಬಾಂಬ್ ಸಿಡಿಸಿದ್ದು, ತಮಗೂ ಸಚಿವ ಸ್ಥಾನ ಬೇಕೆಂದು ಹೇಳಿದ್ದಾರೆ.ಮೈತ್ರಿ ಸರಕಾರದ ಸಂಪುಟ ವಿಸ್ತರಣೆಯಲ್ಲಿ ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ. ಹೀಗಂತ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಹೊಸ ಬಾಂಬ್ ಸಿಡಿಸಿದ್ದಾರೆ.

ಮೈಸೂರಿನಲ್ಲಿ ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನಗೆ ಸಚಿವಸ್ಥಾನ ನೀಡಬೇಕು. ನೀಡಿದರೆ ಜವಾಬ್ದಾರಿಯುತವಾಗಿ ನಿರ್ವಹಣೆ ಮಾಡುತ್ತೇನೆ ಎಂದಿದ್ದಾರೆ.ಆದರೆ ಸಚಿವ ಸ್ಥಾನ ನೀಡುವುದು, ಬಿಡುವುದು ಮುಖ್ಯಮಂತ್ರಿಗೆ ಬಿಟ್ಟಿದ್ದು, ಸಚಿವ ಸ್ಥಾನ ನೀಡುವ ಅಧಿಕಾರ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಗೆ ಇದೆ ಎಂದಿದ್ದಾರೆ.

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನವನ್ನು ಪುನಃ ಪಡೆಯುವುದಿಲ್ಲ ಅಂತ ಹೇಳಿದ ಅವರು, ಪಾರ್ಟಿಯಲ್ಲಿ ಸಮರ್ಥ ನಾಯಕರು ಇದ್ದಾರೆ.ಯುವಜನತೆಗೆ ಅವಕಾಶ ನೀಡಿ ಅಂತ ಪಕ್ಷದ ಮುಖಂಡರಿಗೆ ಹೇಳಿದ್ದೇನೆ ಎಂದರು.
ನನ್ನ ಕ್ಷೇತ್ರದಲ್ಲಿ ಹೆಚ್ಚು ಸಮಯ ಕಳೆಯುತ್ತಿದ್ಧೇನೆ. ಹುಣಸೂರು ಅಭಿವೃದ್ಧಿ ನನ್ನ ಗುರಿ ಹೀಗಂತ ಹೆಚ್. ವಿಶ್ವನಾಥ ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು:...

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್!

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್! ಚಿಕ್ಕಬಳ್ಳಾಪುರ: ನಂದಿನಿ ಹಾಲು...

ಕೊಲೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ಮತ್ತೊಂದು ಎಫ್ಐಆರ್

ಕೊಲೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ...

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರು ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...