ನನಗೆ 75 ವರ್ಷ ವಯಸ್ಸಾಯ್ತು, ಮುಂದೆ ಚುನಾವಣೆಗೆ ಸ್ಪರ್ಧಿಸಲ್ಲ: ಸಚಿವ ಕೆ.ಎನ್.ರಾಜಣ್ಣ
ಮೈಸೂರು: ನನಗೆ 75 ವರ್ಷ ಆಯ್ತು, ಮುಂದೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಆದರೆ ಸಹಕಾರಿ ಕ್ಷೇತ್ರ, ಸಕ್ರೀಯ ರಾಜಕಾರಣದಲ್ಲಿ ಇರುತ್ತೇನೆ ಎಂದು ಸಹಕಾರ ಸಚಿವ ಕೆಎನ್ ರಾಜಣ್ಣ ಹೇಳಿದ್ದಾರೆ. ಮೈಸೂರಿನ ಹುಣಸೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಕೆ.ಎನ್ ರಾಜಣ್ಣ,
ನನಗೆ ಈಗಾಗಲೇ 75 ವರ್ಷವಾಗಿದೆ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವ ಆಲೋಚನೆಯಿಲ್ಲ. ಯುವಕರಿಗೆ ಅವಕಾಶ ಸಿಗಬೇಕು ಎನ್ನುವ ನಿಟ್ಟಿನಲ್ಲಿ ಈ ತೀರ್ಮಾನ ಕೈಗೊಂಡಿದ್ದೇನೆ. ಆದರೆ, ಸಹಕಾರಿ ಕ್ಷೇತ್ರ ಹಾಗೂ ಸಕ್ರೀಯ ರಾಜಕಾರಣದಲ್ಲಿ ಮುಂದುವರಿಯುತ್ತೇನೆ ಎಂದು ತಮ್ಮ ನಿರ್ಧಾರವನ್ನು ಸ್ಪಷ್ಟಪಡಿಸಿದರು.