No menu items!
16.6 C
Munich
Sunday, July 19, 2026

‘ನನ್ನನ್ನು ಫಿನಿಶ್ ಮಾಡಲು ಯತ್ನ’: ಗಾಲಿ ಜನಾರ್ದನ ರೆಡ್ಡಿ ಸ್ಫೋಟಕ ಆರೋಪ

Must read

‘ನನ್ನನ್ನು ಫಿನಿಶ್ ಮಾಡಲು ಯತ್ನ’: ಗಾಲಿ ಜನಾರ್ದನ ರೆಡ್ಡಿ ಸ್ಫೋಟಕ ಆರೋಪ

ಬಳ್ಳಾರಿ: ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿ ಬಳ್ಳಾರಿಯಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಈ ಘಟನೆ ಶಾಸಕ ಗಾಲಿ ಜನಾರ್ದನ ರೆಡ್ಡಿ ಮನೆ ಎದುರು ನಡೆದಿದೆ. ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಜನಾರ್ದನ ರೆಡ್ಡಿ, ತಮ್ಮ ವಿರುದ್ಧ ಗಂಭೀರ ಸಂಚು ರೂಪಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹಾಗೂ ಅವರ ತಂದೆ ಸೂರ್ಯನಾರಾಯಣ ರೆಡ್ಡಿ ಈ ದಾಳಿ ಮಾಡಿಸಿದ್ದಾರೆ ಎಂದು ಜನಾರ್ದನ ರೆಡ್ಡಿ ಆರೋಪಿಸಿದ್ದಾರೆ. ಭರತ್ ರೆಡ್ಡಿಯ ಆಪ್ತ ಸತೀಶ್ ರೆಡ್ಡಿ ಮೂಲಕ ತಮ್ಮ ಹತ್ಯೆಗೆ ಸಂಚು ರೂಪಿಸಲಾಗಿದ್ದು, ತಮ್ಮನ್ನು ‘ಫಿನಿಶ್’ ಮಾಡುವ ಉದ್ದೇಶದಿಂದಲೇ ಈ ದಾಳಿ ನಡೆಸಲಾಗಿದೆ ಎಂದಿದ್ದಾರೆ.

ಗಂಗಾವತಿಯಿಂದ ಕಾರಿನಲ್ಲಿ ಬಂದು ಇಳಿಯುತ್ತಿದ್ದಂತೆ ಸತೀಶ್ ರೆಡ್ಡಿಯ ಗನ್ಮ್ಯಾನ್ಗಳು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದೆ ಎಂದು ಜನಾರ್ದನ ರೆಡ್ಡಿ ಹೇಳಿದ್ದು, ಫೈರ್ ಮಾಡಲಾದ ಬುಲೆಟ್ ಅನ್ನು ಪ್ರದರ್ಶಿಸಿದ್ದಾರೆ.

ವಾಲ್ಮೀಕಿ ಪುತ್ಥಳಿ ಪ್ರತಿಷ್ಠಾಪನೆ ಹೆಸರಿನಲ್ಲಿ ಹಿಂಸಾಚಾರ ಹಾಗೂ ಬೆಂಕಿ ಹಚ್ಚುವ ಕೆಲಸ ನಡೆಯುತ್ತಿದೆ. ಕೊಲೆಗಡುಕರನ್ನು ಹಿಂದೆ ಇಟ್ಟುಕೊಂಡು ದಬ್ಬಾಳಿಕೆ ನಡೆಸಲಾಗುತ್ತಿದೆ ಎಂದು ನಾರಾ ಭರತ್ ರೆಡ್ಡಿ ವಿರುದ್ಧ ಜನಾರ್ದನ ರೆಡ್ಡಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

- Advertisement -spot_img

More articles

- Advertisement -spot_img

Latest article