ನಾವೇ ಮಾಡಿದ ಕಾನೂನಿಗೆ ಗೌರವ ಕೊಡಬೇಕು. ನಾನು ಆರೋಪಗಳಿಗೆ ಹೆದರಿದವನಲ್ಲ. ನಾನು ಒಬ್ಬ ಸಾಮಾನ್ಯ ಪ್ರಜೆಯಾಗಿ ಇಲ್ಲಿಗೆ ಬಂದಿದ್ದೇನೆ. ನಿಮಗೆ ಆದ ತೊಂದರೆ ಎಂದು ನನ್ನ ಪರ ಹೋರಾಟ ಮಾಡಿದ್ದೀರಿ. ನಿಮಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ನಾನು ಜೈಲಿನಲ್ಲಿದ್ದಾಗ ನನ್ನ ಸ್ವಕ್ಷೇತ್ರ ರಾಮನಗರ, ಕನಕಪುರದಲ್ಲಿ ನನ್ನ ಪರವಾಗಿ ನಡೆದ ಪ್ರತಿಭಟನೆಗಿಂತ ಮೈಸೂರಿನಲ್ಲಿ ನಡೆದ ಪ್ರತಿಭಟನೆ ವಿಶೇಷವಾದದ್ದು. ನನ್ನ ಕಷ್ಟ ಕಾಲದಲ್ಲಿ ಮೈಸೂರಿನ ವಕೀಲರು ನನ್ನ ಪರ ನಿಂತರು. ಇದಕ್ಕೆ ನಾನು ಚಿರ ಋಣಿಯಾಗಿದ್ದೇನೆ. ಇದನ್ನು ನಾನು ಸಾಯುವವರೆಗೂ ಮರೆಯುವುದಿಲ್ಲ ಎಂದು ಡಿ.ಕೆ ಶಿವಕುಮಾರ್ ಹೇಳಿದರು.