ನನ್ನ ಮಗಳ ಹತ್ಯೆ ನಡೆದು 9 ತಿಂಗಳು ಕಳೆದರೂ ನ್ಯಾಯ ಸಿಗುತ್ತಿಲ್ಲ: ನಿರಂಜನ್ ಹಿರೇಮಠ ಕಣ್ಣೀರು
ಹುಬ್ಬಳ್ಳಿ: ನನ್ನ ಮಗಳ ಹತ್ಯೆ ನಡೆದು 9 ತಿಂಗಳು ಕಳೆದರೂ ನ್ಯಾಯ ಸಿಗುತ್ತಿಲ್ಲ ಎಂದು ನೇಹಾಳ ತಂದೆ ನಿರಂಜನ್ ಹಿರೇಮಠ ಕಣ್ಣೀರಿಟ್ಟಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನೇಹಾ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು, ನನ್ನ ಮಗಳ ಹತ್ಯೆ ನಡೆದು 9 ತಿಂಗಳು ಕಳೆದರೂ ನ್ಯಾಯ ಸಿಗುತ್ತಿಲ್ಲ. ಈ ತನಿಖೆಯ ಹಾದಿ ಎತ್ತ ಸಾಗುತ್ತಿದೆ ಅನ್ನೋದೇ ಗೊತ್ತಾಗುತ್ತಿಲ್ಲ.
ಹತ್ಯೆ ಪ್ರಕರಣವನ್ನ ಸಿಬಿಐಗೆ ವಹಿಸಬೇಕೆಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಆಗ್ರಹಿಸಿದ್ದಾರೆ. ಈ ಪ್ರಕರಣದ ತನಿಖೆಯ ಬಗ್ಗೆ ಶ್ರೀರಾಮಸೇನೆ ಅಷ್ಟೇ ಅಲ್ದೇ ಸಾರ್ವಜನಿಕರಲ್ಲಿಯೂ ಹಲವು ಪ್ರಶ್ನೆ ಮೂಡಿಸಿದೆ. ಆದ್ದರಿಂದ ಸಿಬಿಐ ತನಿಖೆ ಆಗಲಿ ಎಂದಿದ್ದಾರೆ. ಕೊಲೆ ಕೇಸ್ನಲ್ಲಿ ಶಾಸಕರ ಕೈವಾಡ ಇರುವುದು ಸತ್ಯ ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರ 120 ದಿನಗಳಲ್ಲಿ ನನ್ನ ಮಗಳ ಸಾವಿಗೆ ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿತ್ತು. ಆದರೆ, ಒಂಬತ್ತು ತಿಂಗಳು ಕಳೆದರೂ ನನ್ನ ಮಗಳ ಸಾವಿಗೆ ನ್ಯಾಯ ಸಿಗುವ ಭರವಸೆ ಸಿಗುತ್ತಿಲ್ಲ. ರಾಜ್ಯ ಸರ್ಕಾರ ಹಾಗೂ ಸಿಐಡಿಯಿಂದ ನ್ಯಾಯ ಸಿಗುವ ಭರವಸೆ ಕ್ಷೀಣಿಸುತ್ತಿದೆ. ಈ ಕಾರಣದಿಂದಾಗಿಯೇ ಈ ಪ್ರಕರಣವನ್ನ ಸಿಬಿಐಗೆ ವಹಿಸಬೇಕು. ಸಿಬಿಐಗೆ ವಹಿಸಿದರೆ ಮಾತ್ರ ನನ್ನ ಮಗಳ ಸಾವಿಗೆ ನ್ಯಾಯ ಸಿಗುತ್ತದೆ ಎಂದರು.