ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ಎನ್ಡಿಎಗೆ ಶಕ್ತಿ ತುಂಬಬೇಕು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದರು. ನಗರದಲ್ಲಿ ಮಾತನಾಡಿದ ಅವರು, ಮೈಸೂರು ಭಾಗದಲ್ಲಿ ಜೆಡಿಎಸ್ ಬಲ ಇದೆ. ಮೈತ್ರಿ ಅಭ್ಯರ್ಥಿ ದಾಖಲೆಯ ಮತಗಳಿಸುವ ಮೂಲಕ ಗೆಲುವು ಸಾಧಿಸಬೇಕು, ಮೈತ್ರಿ ಅಭ್ಯರ್ಥಿ ಕೆ.ವಿವೇಕಾನಂದರಿಗೆ ಆರ್ಥಿಕ ಶಕ್ತಿ ಇದೆ, ಹಣದ ಅಗತ್ಯವಿಲ್ಲ. ಸರಕಾರದ ಸೌಲಭ್ಯದ ಜೊತೆಗೆ ವೈಯಕ್ತಿಕವಾಗಿ ಕಷ್ಟ ಸುಖದಲ್ಲಿ ಅವರು ಭಾಗಿಯಾಗುತ್ತಾರೆ” ಎಂದು ಹೇಳಿದರು.
ಮಾಜಿ ಸಚಿವ ಎಚ್.ಡಿ.ರೇವಣ್ಣ ಮಾತನಾಡಿ, ”ನಮ್ಮ ಬಳಿಯೇ ತಿಂದು ತೇಗಿದವರೇ ಇಂದು ನಮ್ಮ ವಿರುದ್ದ ಮಾತನಾಡುತ್ತಾರೆ. ಅವರ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ” ಎಂದರು. ‘ಕುಮಾರಸ್ವಾಮಿ ಸಿಎಂ ಆಗಿದ್ದಾಗ ಶಿಕ್ಷಕರ ಕ್ಷೇತ್ರಕ್ಕೆ ಕೊಟ್ಟ ಕೊಡುಗೆ ಅಪಾರ. ಶಿಕ್ಷಕರ ಕ್ಷೇತ್ರದಲ್ಲಿ ಸುಧಾರಣೆ ತಂದಿದ್ದು ಕುಮಾರಸ್ವಾಮಿ. ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಗೆಲ್ಲಿಸುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ತೊಲಗಿಸಬೇಕು. ಹಾಸನ ಜಿಲ್ಲೆಯಿಂದ ಮೈತ್ರಿ ಅಭ್ಯರ್ಥಿಗೆ ಮೊದಲ ಪ್ರಾಶಸ್ತದ ಮತಗಳು ಹೆಚ್ಚು ಸಿಗುವ ನಿಟ್ಟಿನಲ್ಲಿ ಪರಿಶ್ರಮಿಸಲಾಗುವುದು. ಶುಕ್ರವಾರ ಹಾಸನದಲ್ಲಿ ಜಂಟಿ ಸಭೆ ನಡೆಸಲಾಗುವುದು” ಎಂದು ತಿಳಿಸಿದರು.
ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್ ಸರ್ಕಾರವನ್ನು ತೊಲಗಿಸಬೇಕು !
Date:






