ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗೆ ಅನ್ಯಾಯ ಖಂಡಿಸಿ ನಡೆದ ಬೃಹತ್ ಪ್ರತಿಭಟನೆ ವೇಳೆ ಮಾತನಾಡಿದ ಅವರು, ಉತ್ತರ ಕರ್ನಾಟಕದ ಜನ ಪ್ರವಾಹದಿಂದ ನಲುಗಿ ಹೋಗಿದ್ದಾರೆ. ಪ್ರವಾಹ ಪರಿಸ್ಥಿತಿ ನಂತರ 60 ದಿನ ಕಳೆದರೂ ಕೇಂದ್ರದಿಂದ ಯಾವುದೇ ಪರಿಹಾರ ಬಂದಿಲ್ಲ. ನಮ್ಮ ಕೇಂದ್ರ ಸರ್ಕಾರ ಏನು ಮಾಡುತ್ತಿದೆ ಎಂದು ಕಿಡಿಕಾರಿದರು.
ಯಾವುದೇ ಸಹಾಯ ಮಾಡದ ಇಂತವರನ್ನು ಆಯ್ಕೆ ಮಾಡಿದ್ದು ನಮ್ಮದೇ ತಪ್ಪು, ಅಂತಹವರನ್ನು ಆಯ್ಕೆ ಮಾಡಿದ ತಪ್ಪಿಗೆ ನಮಗೆ ನಾವು ಚಪ್ಪಲಿಯಲ್ಲಿ ಹೊಡೆದುಕೊಳ್ಳಬೇಕು ನೋಡಿ ನಾವು ಇಂದು ಈ ಪರಿಸ್ಥಿತಿ ಎದುರಿಸುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು