No menu items!
10.3 C
Munich
Saturday, September 12, 2026

ನಮ್ಮ ಪ್ರಾರ್ಥನೆಗೆ ಫಲ ನಮಗೆ ದೊರೆಯುತ್ತದೆ ಅನ್ನೋ ನಂಬಿಕೆಯಿದೆ !

Must read

ಬೆಂಗಳೂರು: ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ರಜೆ ಘೋಷಣೆ ಮಾಡಲು ಬಿಜೆಪಿಯಿಂದ ಒತ್ತಾಯ ವಿಚಾರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಾವು ನಮ್ಮ ಭಕ್ತಿ, ನಮ್ಮ ಗೌರವ, ನಮ್ಮ ಧರ್ಮ ಪ್ರಚಾರಕ್ಕೆ ನಾವು ಏನು ಮಾಡಲ್ಲ. ನಮ್ಮ ಭಾವನೆ ಇದೆಯಲ್ಲ. ನಮ್ಮ ಮಂತ್ರಿಗಳೇ ಎಲ್ಲಾ ದೇವಸ್ಥಾನಗಳಲ್ಲಿ ಮಾಡಬೇಕಾದ ಆಚರಣೆಗಳಿಗೆ ಆದೇಶ ಹೊರಡಿಸಿದ್ದಾರೆ ಎಂದು ಹೇಳಿದ್ದಾರೆ.
ಪೂಜೆ, ಪುನಸ್ಕಾರ ಏನು ಮಾಡಬೇಕೋ ಆ ಕೆಲಸ ಮಾಡ್ತಿದ್ದೇವೆ. ನಮ್ಮ ಪ್ರಾರ್ಥನೆಗೆ ಫಲ ನಮಗೆ ದೊರೆಯುತ್ತದೆ ಅನ್ನೋ ನಂಬಿಕೆಯಿದೆ. ಹೀಗಾಗಿ ಎಲ್ಲರೂ ಪ್ರಾರ್ಥನೆ ಮಾಡಿಕೊಳ್ಳಿ ಅಂತ ಹೇಳ್ತಿದ್ದೇವೆ ಎಂದರು. ಸಿದ್ದರಾಮಯ್ಯಹೆಸರಲ್ಲಿ ರಾಮ ಇದ್ದಾನೆ. ನನ್ನ ಹೆಸರಲ್ಲಿ ಶಿವ ಇದ್ದಾನೆ. ನಮಗೆ ಯಾರೂ ಹೇಳಿಕೊಡಬೇಕಿಲ್ಲ ಎಂದು ಹೇಳಿದರು.

- Advertisement -spot_img

More articles

- Advertisement -spot_img

Latest article