ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 50 ಟ್ರೇನ್ ಆಪರೇಟರ್, ಸ್ಟೇಷನ್ ಕಂಟ್ರೋಲರ್ ಹುದ್ದೆಗಳು ಖಾಲಿ ಇದ್ದು, 10ನೇ ತರಗತಿ, ಡಿಪ್ಲೋಮಾ ಪಾಸಾದವರು ಅರ್ಜಿ ಸಲ್ಲಿಸಬಹುದು.
ಡಿಸೆಂಬರ್ 15 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 15, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಮೆಟ್ರೋದ ಅಧಿಕೃತ ವೆಬ್ ಸೈಟ್ bmrc.co.in ಗೆ ಭೇಟಿ ನೀಡಬಹುದು.
ಸಂಸ್ಥೆ ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್
ಹುದ್ದೆಯ ಹೆಸರು ಟ್ರೇನ್ ಆಪರೇಟರ್, ಸ್ಟೇಷನ್ ಕಂಟ್ರೋಲರ್
ಒಟ್ಟು ಹುದ್ದೆಗಳು 50
ವಿದ್ಯಾರ್ಹತೆ 10ನೇ ತರಗತಿ, ಡಿಪ್ಲೋಮಾ
ಉದ್ಯೋಗದ ಸ್ಥಳ ಬೆಂಗಳೂರು
ವೇತನ ಮಾಸಿಕ ₹ 33,040-63,490
ಅರ್ಜಿ ಸಲ್ಲಿಕೆ ವಿಧಾನ ಆನ್ಲೈನ್
ಅರ್ಜಿ ಸಲ್ಲಿಕೆ ಆರಂಭ ದಿನಾಂಕ 15/12/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15/01/2022