No menu items!
11.1 C
Munich
Wednesday, April 29, 2026

ನಮ್ಮ ಮೆಟ್ರೋದಲ್ಲಿ ಕೆಲಸ ಖಾಲಿ ಇದೆ, ಅರ್ಜಿ ಹಾಕಿ

Must read

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಕೆ ಮಾಡಲು 27 ಅಕ್ಟೋಬರ್ 2021 ಕೊನೆಯ ದಿನವಾಗಿದೆ.

 

ಬಿಎಂಆರ್‌ಸಿಎಲ್ ಡೆಪ್ಯೂಟಿ ಜನರಲ್ ಮ್ಯಾನೇಜರ್ 3, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ 1 ಹುದ್ದೆಯನ್ನು ಭರ್ತಿ ಮಾಡಲು ಅರ್ಜಿಯನ್ನು ಕರೆದಿದೆ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕು. ವೇತನ ಶ್ರೇಣಿ 85000-125000 ಪ್ರತಿ ತಿಂಗಳು.

ಡೆಪ್ಯೂಟಿ ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿಗಳನ್ನು ಸಲ್ಲಿಸುವವರು ವಾಣಿಜ್ಯ ವಿಷಯದಲ್ಲಿ ಪದವಿ, ಸಿಎ, ಸಿಎಂಎ ಪದವಿಯನ್ನು ಪಡೆದಿರಬೇಕು. ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಹುದ್ದೆಗೆ ವಾಣಿಜ್ಯ ವಿಷಯದಲ್ಲಿ ಪದವಿ, ಎಂಬಿಎ, ಎಂಕಾಂ, ಸಿಎ-ಇಂಟರ್, ಸಿಎಂಎ-ಇಂಟರ್ ವಿದ್ಯಾರ್ಹತೆ ನಿಗದಿ ಮಾಡಲಾಗಿದೆ. ಡೆಪ್ಯೂಟಿ ಜನರಲ್ ಮ್ಯಾನೇಜರ್ ಹುದ್ದೆಗೆ 50 ವರ್ಷಗಳ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ. ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಹುದ್ದೆಗೆ ಗರಿಷ್ಠ ವಯೋಮಿತಿ 45 ವರ್ಷಗಳು. ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

 

ಡೆಪ್ಯೂಟಿ ಜನರಲ್ ಮ್ಯಾನೇಜರ್ ಹುದ್ದೆಗೆ ಮಾಸಿಕ 12500 ರೂ. ಮಾಸಿಕ ಮತ್ತು ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಹುದ್ದೆಗೆ 85000 ರೂ. ಮಾಸಿಕ ವೇತನ ನಿಗದಿ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು bmrc.co.in ವೆಬ್ ಸೈಟ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಬಳಿಕ ಅರ್ಜಿಗಳನ್ನು ಅಗತ್ಯ ದಾಖಲೆಗಳ ಜೊತೆ ವಿಳಾಸಕ್ಕೆ ಸಲ್ಲಿಸಬಹುದಾಗಿದೆ.

ಅರ್ಜಿಗಳನ್ನು ಕಳಿಸಲು ವಿಳಾಸ; General Manager (HR), Bangalore Metro Rail Corporation Limited, III Floor, BMTC Complex, K.H. Road, Shanthinagar, Bangalore – 560027. ಅರ್ಜಿಗಳನ್ನು ಸಲ್ಲಿಸುವಾಗ ಗೊಂದಲಗಳು ಉಂಟಾದರೆ bmrcl@dataone.in ವಿಳಾಸಕ್ಕೆ ಇ-ಮೇಲ್ ಕಳಿಸಬಹುದಾಗಿದೆ.

 

 

 

 

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article