ನಮ್ಮ ಮೆಟ್ರೋ ಟ್ರ್ಯಾಕ್‌ʼಗೆ ಜಿಗಿದು ಯುವಕನೊಬ್ಬ ಆತ್ಮಹತ್ಯೆ !

Date:

ಬೆಂಗಳೂರು: ಬೆಂಗಳೂರಿನ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ನಮ್ಮ ಮೆಟ್ರೋ ಟ್ರ್ಯಾಕ್‌ʼಗೆ ಜಿಗಿದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡಿದಿದೆ. ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ಟ್ರೈನ್ ಬರುವಾಗ ಹಳಿಗೆ ಜಿಗಿದು ಪ್ರಾಣಕಳೆದುಕೊಂಡಿದ್ದಾನೆ. ಮೃತ ಯುವಕ ಯಾರು? ಯಾಕಾಗಿ ಆತ್ಮಹತ್ಯೆ ಮಾಡಿಕೊಂಡ ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಕಾರಣಕ್ಕೆ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಕೂಡಲೇ ಸಿಬ್ಬಂದಿ ಮೆಟ್ರೋದಿಂದ ಎಲ್ಲ ಪ್ರಯಾಣಿಕರನ್ನು ಇಳಿಸಿದ್ದಾರೆ. ಮಾರ್ಚ್ 21ರ ಮಧ್ಯಾಹ್ನ 2:10ರ ಸುಮಾರಿಗೆ ಹಳಿಗೆ ಹಾರಿದ್ದಾನೆ. ಈ ಬಗ್ಗೆ ಬಿಎಂಆರ್‌ಸಿಎಲ್‌ ಎಕ್ಸ್‌ ಮೂಲಕ ತಿಳಿಸಿದೆ.
ಸದ್ಯ ಅತ್ತಿಗುಪ್ಪೆ ನಿಲ್ದಾಣದಲ್ಲಿ ರೈಲು ಓಡಾಟ ಸ್ಥಗಿತವಾಗಿದ್ದು, ಮಾಗಡಿ ರೋಡ್‌ನಿಂದ ವೈಟ್ ಫೀಲ್ಡ್‌ವರೆಗೆ ಮಾತ್ರ ಮೆಟ್ರೋ ಸಂಚಾರ ಇದೆ. ಮಾಗಡಿ ರಸ್ತೆಯಿಂದ ಚಲ್ಲಘಟ್ಟದವರೆಗೆ ಯಾವುದೇ ಸೇವೆ ಇಲ್ಲ ಎಂದು ನಮ್ಮ ಮೆಟ್ರೋ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ವಿಜಯನಗರ ಪೊಲೀಸರು ಹಾಗೂ ಬಿಎಂಆರ್‌ಸಿಎಲ್‌ನ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಯುಟಿ ಖಾದರ್ ವಿರುದ್ದ ಭ್ರಷ್ಟಾಚಾರ ಆರೋಪ: ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಯಲಿ ಎಂದ ವಿಶ್ವೇಶ್ವರ ಹೆಗಡೆ ಕಾಗೇರಿ

ಯುಟಿ ಖಾದರ್ ವಿರುದ್ದ ಭ್ರಷ್ಟಾಚಾರ ಆರೋಪ: ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಯಲಿ...

ಯೆಲ್ಲೋ ಮೆಟ್ರೋಗೆ ಹೊಸ ರೈಲು ಸೇರ್ಪಡೆ: ನಾಳೆಯಿಂದ 15 ನಿಮಿಷಕ್ಕೊಮ್ಮೆ ಸಂಚಾರ!

ಯೆಲ್ಲೋ ಮೆಟ್ರೋಗೆ ಹೊಸ ರೈಲು ಸೇರ್ಪಡೆ: ನಾಳೆಯಿಂದ 15 ನಿಮಿಷಕ್ಕೊಮ್ಮೆ ಸಂಚಾರ! ಬೆಂಗಳೂರು:...

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ ನ.3 ರಂದು ದೋಷಾರೋಪ

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ...

ಮೋಂಥಾ ಚಂಡಮಾರುತ: ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಾದ್ಯಂತ ಭಾರೀ ಮಳೆ

ಮೋಂಥಾ ಚಂಡಮಾರುತ: ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಾದ್ಯಂತ ಭಾರೀ ಮಳೆ ಬೆಂಗಳೂರು:...