ಇಂದಿನಿಂದ ನಮ್ಮ ಮೆಟ್ರೋ ಸಂಚಾರ ರಾತ್ರಿ 9 ಗಂಟೆಯವರೆಗೂ ಸಂಚರಿಸಲಿದೆ.ಕೊರೊನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಹಲವು ಬಾರಿ ನಮ್ಮ ಮೆಟ್ರೋ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು.
ಇಲ್ಲಿಯವರೆಗೆ ರಾತ್ರಿ 8 ಗಂಟೆ ವರೆಗೆ ಮಾತ್ರ ಸೇವೆ ಇತ್ತು, ಬೆಳಗ್ಗೆ 7 ರಿಂದ ರಾತ್ರಿ 9ರವರೆಗೆ ದಿನದಲ್ಲಿ 14 ತಾಸುಗಳ ಮೆಟ್ರೋ ರೈಲು ಸೇವೆ ಇರಲಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.
ದಟ್ಟಣೆ ಅವಧಿಯಲ್ಲಿ ಪ್ರತಿ ಐದು ನಿಮಿಷಕ್ಕೊಂದು, ಸಾಮಾನ್ಯ ಅವಧಿಯಲ್ಲಿ 15 ನಿಮಿಷಕ್ಕೊಂದು ರೈಲುಗಳು ಸಂಚರಿಸಲಿವೆ. ಇತ್ತೀಚಿಗಷ್ಟೇ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕರಾಗಿ ಇತ್ತೀಚಿಗಷ್ಟೇ ಅಂಜುಂ ಪರ್ವೇಜ್ ನೇಮಕವಾಗಿದ್ದಾರೆ.
ಹಿರಿಯ ಐಎಎಸ್ ಅಧಿಕಾರಿ ಅಂಜುಂ ಪರ್ವೇಜ್ ಅವರನ್ನು ಬೆಂಗಳೂರು ಮೆಟ್ರೋ ಎಂಡಿಯಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಆಗಿದ್ದ ಪರ್ವೇಜ್, ಕರ್ನಾಟಕ ರಾಜ್ಯ ಸರ್ಕಾರದ ಕೋರಿಕೆ ಮೇರೆಗೆ ಕೇಂದ್ರದಿಂದ ಬಿಎಮ್ಆರ್ಸಿಎಲ್ ಎಂಡಿ ಆಗಿ ನೇಮಕಗೊಂಡಿದ್ದಾರೆ.
ನಮ್ಮ ಮೆಟ್ರೋ ಕಾಮಗಾರಿಗಾಗಿ 350 ಮರಗಳನ್ನು ಕಡಿಯಲು ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ. ಹೈಕೋರ್ಟ್ ಆದೇಶದಿಂದಾಗಿ ಸುಮಾರು ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ರೈಲು ಮಾರ್ಗ ಕಾಮಗಾರಿ ಪುನಾರಂಭವಾಗಲಿದೆ.

ಆದರೆ ಷರತ್ತೊಂದನ್ನು ವಿಧಿಸಿತ್ತು, ಅದರ ಬದಲಾಗಿ 4 ಸಾವಿರ ಗಿಡಗಳನ್ನು ನೆಡುವಂತೆ ಸೂಚಿಸಲಾಗಿದೆ ನಾಗವಾರ-ಗೊಟ್ಟಿಗೆರೆ ಮಾರ್ಗದ ಮೆಟ್ರೊ ರೈಲು ಯೋಜನೆಗೆ ಮರಗಳನ್ನು ಕಡಿಯಲು ಒಪ್ಪಿಗೆ ನೀಡಿರುವ ಹೈಕೋರ್ಟ್, ಅದಕ್ಕೆ ಪರಿಹಾರವಾಗಿ 4 ಸಾವಿರ ಗಿಡಗಳನ್ನು ನೆಡುವಂತೆ ಬಿಎಂಆರ್‌ಸಿಎಲ್‌ಗೆ ಆದೇಶಿಸಿದೆ.