ನಮ್ಮ ರಾಜ್ಯದ ಡ್ರೈವರ್ ಗಳಿಗೆ ಧಮ್ಕಿ ಹಾಕುವುದನ್ನು ನಿಲ್ಲಿಸಬೇಕು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌

Date:

ನಮ್ಮ ರಾಜ್ಯದ ಡ್ರೈವರ್ ಗಳಿಗೆ ಧಮ್ಕಿ ಹಾಕುವುದನ್ನು ನಿಲ್ಲಿಸಬೇಕು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌

ಬೆಳಗಾವಿ: ನಮ್ಮ ರಾಜ್ಯದ ಡ್ರೈವರ್ ಗಳಿಗೆ ಧಮ್ಕಿ ಹಾಕುವುದನ್ನು ನಿಲ್ಲಿಸಬೇಕು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಬಸ್ ಕಂಡಕ್ಟರ್ ಮೇಲೆ ನಡೆದ ಹಲ್ಲೆಯ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಘಟನೆಯನ್ನು ನಾನು ಖಂಡಿಸುತ್ತೆನೆ.‌ ಘಟನೆ ನಡೆದು ಐದೇ ನಿಮಿಷಕ್ಕೆ ಕಮೀಷನರ್ ಜೊತೆ ನಾನು ಮಾತನಾಡಿದ್ದೆ.
ಯಾರು ತಪ್ಪಿತಸ್ಥರು ಅವರ ಮೇಲೆ ತಕ್ಷಣ ಕ್ರಮ ತೆಗೆದುಕೊಳ್ಳುವಂತೆ ಹೇಳಿದ್ದೇನೆ. ‌ನಾವೆಲ್ಲರೂ ಮೊದಲು ಭಾರತೀಯರು ಕನ್ನಡಿಗರು ಸ್ವರಾಜ್ಯದ ಬಗ್ಗೆ ಮಾತನಾಡಿದಾಗ ನಾಲ್ಕೈದು ಪುಂಡರು ಬಂದು ಭಾಷಾ ವಿವಾದ ಎಳೆದು ರಾಜಕೀಯ ಬೇಳೆ ಬೇಯಿಸಿಕೊಳ್ತಿದ್ದಾರೆ. ಇದನ್ನು ಖಂಡಿಸುತ್ತೆನೆ ಎಂದಿದ್ದಾರೆ.
ಸರ್ಕಾರಿ ನೌಕರನ ಮೇಲೆ ಕೈ ಮಾಡಿದ್ದು ಅಕ್ಷಮ್ಯ ಅಪರಾಧ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ಹಾಗೆ ನಾವು ಮಾಡ್ತೀವಿ. ನಮ್ಮ ರಾಜ್ಯದ ಡ್ರೈವರ್ ಗಳಿಗೆ ಧಮ್ಕಿ ಹಾಕುವುದನ್ನು ನಿಲ್ಲಿಸಬೇಕು.
ಸ್ಥಳೀಯ ಸಿಪಿಐ ನಿಭಾಯಿಸುವುದರಲ್ಲಿ ವಿಫಲರಾಗಿದ್ದಾರೆ ಎನ್ನುವುದನ್ನು‌ ಕೇಳಿದ್ದೆನೆ. ‌ಸ್ಥಳೀಯ ಸಿಪಿಐ ಗಮನಕ್ಕೂ ತರದೇ ಪೋಕ್ಸೋ ಕೇಸ್ ಮಾಡಿದ್ದಾರೆ. ಇದರ ಕುರಿತು ನಾನು ಗೃಹ ಸಚಿವರು ಹಾಗೂ ಡಿಜಿಯವರಿಗೂ ಮಾತನಾಡುತ್ತೆನೆ ಎಂದು ಹೆಬ್ಬಾಳಕರ್ ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ: ಶಿವಾನಂದ ಪಾಟೀಲ್

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ:...

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್ ರನ್ ಪ್ರಕರಣ!

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್...

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ...