No menu items!
20.3 C
Munich
Friday, August 21, 2026

ನಮ್ಮ ರಾಜ್ಯದ ಹಿತಕ್ಕೆ ಬೇಕಾದ ಕೆಲಸ ನಾವು ಮಾಡುತ್ತೇವೆ !

Must read

ಬೆಂಗಳೂರು: ನಾವು ಆರಂಭಿಸಿದ ಗ್ಯಾರಂಟಿಗಳನ್ನು ನೋಡಿ ಪ್ರಧಾನಿಗಳು ಈಗ ಅದನ್ನೇ ಪ್ರಚಾರಕ್ಕೆ ಬಳಸುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರ ಭಾಷಣದ ನಂತರ ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಡಿಸಿಎಂ ಅವರು ಪ್ರತಿಕ್ರಿಯೆ ನೀಡಿದರು.
“ನಾವು ಆರಂಭಿಸಿದ ಗ್ಯಾರಂಟಿಗಳನ್ನು ನೋಡಿ ಪ್ರಧಾನಿಗಳು ಈಗ ಅದನ್ನೇ ಪ್ರಚಾರಕ್ಕೆ ಬಳಸುತ್ತಿದ್ದಾರೆ. ದೇಶದ ಇತಿಹಾಸದಲ್ಲಿ ಯಾವುದೇ ಸರ್ಕಾರಗಳು ಮಾಡಲಾಗದನ್ನು ನಾವು ಅಧಿಕಾರಕ್ಕೆ ಬಂದ ಆರೇ ತಿಂಗಳಲ್ಲಿ ಜಾರಿ ಮಾಡಿದ್ದೇವೆ. ಇದನ್ನು ವಿರೋಧ ಪಕ್ಷದವರಿಗೆ ಸಹಿಸಲಾಗುತ್ತಿಲ್ಲ.”
ಬಿಜೆಪಿ ನಾಯಕರು ಕೇಸರಿ ಶಾಲು ಧರಿಸಿ ಸದನಕ್ಕೆ ಬಂದ ಬಗ್ಗೆ ಕೇಳಿದಾಗ, “ಅವರು ಏನಾದರೂ ಹಾಕಿಕೊಂಡು ಬರಲಿ. ಕೇಸರಿ ಅವರ ಮನೆ ಆಸ್ತಿಯೇ? ರಾಜಕಾರಣದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕಾರಣ ಇರಬಾರದು. ಅವರು ಧರ್ಮದಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಮಾಡಿಕೊಳ್ಳಲಿ. ಅವರು ಕೇಸರಿಯಾದರೂ ಧರಿಸಲಿ, ಕಪ್ಪಾದರೂ ಧರಿಸಲಿ. ನಮ್ಮ ರಾಜ್ಯದ ಹಿತಕ್ಕೆ ಬೇಕಾದ ಕೆಲಸ ನಾವು ಮಾಡುತ್ತೇವೆ” ಎಂದರು.

- Advertisement -spot_img

More articles

- Advertisement -spot_img

Latest article