ನಮ್ಮ ಹೋರಾಟದಿಂದಲೇ ಉಚಿತ ಲಸಿಕೆ ಘೋಷಣೆ: ಡಿಕೆಶಿ

Date:

”ನಾವು ಹೋರಾಟ ಮಾಡಿದ ಫಲವಾಗಿ ಈಗ ಉಚಿತ ಲಸಿಕೆ ಘೋಷನೆ ಮಾಡಲಾಗಿದೆ. ಕೇಂದ್ರ ಸರ್ಕಾರವು ನಾವು ಪ್ರತಿಭಟಿಸಿದ್ದರಿಂದ ದೇಶದಾದ್ಯಂತ ಉಚಿತ ಲಸಿಕೆ ಘೋಷಣೆ ಮಾಡಿದೆ” ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

 

ಸೋಮವಾರ ದೇಶವನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ”18 ವರ್ಷ ಮೇಲ್ಪಟ್ಟವರಿಗೆಲ್ಲರಿಗೂ ಕೇಂದ್ರ ಸರ್ಕಾರದಿಂದ ಉಚಿತ ಕೊರೊನಾ ಲಸಿಕೆ ನೀಡಲಾಗುವುದು” ಎಂದು ಘೋಷಣೆ ಮಾಡಿದ್ದರು. ಹಾಗೆಯೇ ”ರಾಜ್ಯಗಳ ಲಸಿಕೆಗಳ ಬೇಡಿಕೆಯನ್ನು ಈಡೇರಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ. 18 ವರ್ಷ ಮೇಲ್ಪಟ್ಟವರಿಗೆಲ್ಲರಿಗೂ ಲಸಿಕೆಯನ್ನು ಉಚಿತವಾಗಿ ನೀಡಲು ಕೇಂದ್ರ ಕ್ರಮ ಕೈಗೊಂಡಿದೆ” ಎಂದು ಹೇಳಿದ್ದರು.

ಈ ಉಚಿತ ಲಸಿಕೆ ವಿಚಾರದಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಡಿ.ಕೆ.ಶಿವಕುಮಾರ್, ”ಎಲ್ಲಾ ರಾಜ್ಯಗಳಲ್ಲಿ ನಮ್ಮ ಪಕ್ಷದವರು ರಾಜ್ಯಪಾಲರನ್ನು ಭೇಟಿ ಮಾಡಿ, ಉಚಿತ ಲಸಿಕೆಗೆ ಒತ್ತಾಯಿಸಿದ್ದಾರೆ. ನಮ್ಮ ಹೋರಾಟದ ಫಲವಾಗಿ ಈ ಉಚಿತ ಲಸಿಕೆ ಘೋಷಣೆ ಮಾಡಲಾಗಿದೆ” ಎಂದಿದ್ದಾರೆ.

 

ಇನ್ನು ”ನಾವು ನಮ್ಮ ಶಾಸಕರ ನಿಧಿಯಿಂದ ಲಸಿಕೆ ನೀಡಲು ಅನುಮತಿ ನೀಡಿ ಎಂದು ಮನವಿ ಮಾಡಿದ್ದೆವು. ಆದರೆ ಸರ್ಕಾರ ಅದನ್ನು ನಿರಾಕರಿಸಿತ್ತು. ಈ ಮೂಲಕ ಜನರ ಜೀವ ರಕ್ಷಿಸಲು ಸಕಾರ ನಿರಾಕರಿಸಿದೆ. ಲಸಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರದಷ್ಟೇ ಕರ್ನಾಟಕ ಬಿಜೆಪಿ ಸರ್ಕಾರ ವಿಫಲವಾಗಿದೆ” ಎಂದು ಆರೋಪಿಸಿದರು.

”ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ಸರ್ಕಾರ ಎಚ್ಚೆತ್ತು ಲಸಿಕೆ ಘೋಷಣೆ ಮಾಡಿದೆ. ಈ ಸಂದರ್ಭದಲ್ಲಿ ಮಾಧ್ಯಮಗಳು ಕೂಡಾ ಜನರ ಪರವಾಗಿ, ಜನರ ಧ್ವನಿಯಾಗಿ ಕಾರ್ಯನಿರ್ವಹಿಸಿದೆ. ಈ ಹಿನ್ನೆಲೆ ನಾನು ನ್ಯಾಯಾಲಯ ಹಾಗೂ ಮಾಧ್ಯಮಕ್ಕೆ ಧನ್ಯವಾದ ತಿಳಿಸುತ್ತೇನೆ” ಎಂದು ಕೂಡಾ ಈ ವೇಳೆಯೇ ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್ ರನ್ ಪ್ರಕರಣ!

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್...

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ...

ಕರ್ನೂಲ್ ನಲ್ಲಿ ಖಾಸಗಿ ಬಸ್ ಹೊತ್ತಿ ಉರಿದು 10ಕ್ಕೂ ಹೆಚ್ಚು ಮಂದಿ ಸಜೀವ ದಹನ

ಕರ್ನೂಲ್ ನಲ್ಲಿ ಖಾಸಗಿ ಬಸ್ ಹೊತ್ತಿ ಉರಿದು 10ಕ್ಕೂ ಹೆಚ್ಚು ಮಂದಿ...

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...