ನರೇಂದ್ರ ಮೋದಿ ಅವರು ಇಂದು ಕೋವಿಡ್ 19 ಪರಿಸ್ಥಿತಿ ಕುರಿತಂತೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಹೇಳಿದ್ದೇನು?

0
34

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೋವಿಡ್ 19 ಪರಿಸ್ಥಿತಿ ಕುರಿತಂತೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಈ ಸಂದರ್ಭದಲ್ಲಿ ಪ್ರಧಾನಿಯವರು ಭಾರತದಲ್ಲಿ ಲಸಿಕೆ ತಯಾರಿಕೆಗೆ ಲಭ್ಯವಿರುವ ಎಲ್ಲ ಅವಕಾಶಗಳ ಸದುಪಯೋಗಪಡಿಸಿಕೊಳ್ಳಲು ಕೇಂದ್ರ ಸರ್ಕಾರ ಸಿದ್ಧವಿದೆ. ರಾಜ್ಯ ಸರ್ಕಾರಗಳು ಇದರಲ್ಲಿ ಕೈಜೋಡಿಸಬೇಕು.
ಎಲ್ಲ ರಾಜ್ಯಗಳಿಗೂ ಸಾಕಷ್ಟು ಪ್ರಮಾಣದಲ್ಲಿ ಲಸಿಕೆ ಒದಗಿಸಲಾಗಿದ್ದು, ಕೊರತೆಯಾಗದಂತೆ ಎಚ್ಚರ ವಹಿಸಲಾಗುವುದು ಎಂದರು.
ಲಸಿಕೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚುವುದೇ ಹೊರತು ವಾತಾವರಣದಲ್ಲಿನ ವೈರಸ್ ನಿರ್ನಾಮ ಆಗುವುದಿಲ್ಲ. ಆದ್ದರಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು.

ಈ ಕುರಿತು ಜನರಲ್ಲಿ ಅರಿವು ಮೂಡಿಸಬೇಕು ಎಂದು ಪ್ರಧಾನ ಮಂತ್ರಿಯವರು ತಿಳಿಸಿದರು.ಬೆಂಗಳೂರು ನಗರ, ಬೀದರ್, ಕಲಬುರಗಿ ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಕೋವಿಡ್ 19 ಪ್ರಕರಣಗಳನ್ನು ನಿಯಂತ್ರಿಸಲು ವಿಶೇಷ ಗಮನ ನೀಡುವಂತೆ ಸಲಹೆ ನೀಡಿದ್ದಾರೆ. ಅದರಂತೆ ಕ್ರಮ ವಹಿಸಲಾಗುವುದು. ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸುವಂತೆ ತಿಳಿಸಿದರು. ಈ ಕುರಿತೂ ಕೂಡ ಕ್ರಮ ವಹಿಸಲಾಗುತ್ತಿದೆ. ಎರಡು ಮತ್ತು 3ನೇ ಹಂತದ ನಗರಗಳು ಮತ್ತು ಆಸುಪಾಸಿನ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸಿ. ಹಳ್ಳಿಗಳಿಗೆ ಹಬ್ಬದಂತೆ ಎಚ್ಚರ ವಹಿಸಿ. ಸಣ್ಣ ಪಟ್ಟಣಗಳಲ್ಲಿ ರೆಫರಲ್ ವ್ಯವಸ್ಥೆ ಮತ್ತು ಅಂಬ್ಯುಲೆನ್ಸ್ ವ್ಯವಸ್ಥೆಗಳನ್ನು ಬಲಪಡಿಸಲು ಸೂಚಿಸಿದರು. ಲಸಿಕೆಗಳು ವ್ಯರ್ಥವಾಗುವ ಪ್ರಮಾಣ ಕಡಿಮೆಗೊಳಿಸುವಂತೆ ರಾಜ್ಯಗಳಿಗೆ ಸಲಹೆ ನೀಡಿದರು. ಸಭೆಯಲ್ಲಿ ಕೋವಿನ್ ಪೋರ್ಟಲ್ ನಲ್ಲಿ ನೋಂದಾಯಿಸಿಕೊಂಡ ರಾಜ್ಯದ 2042 ಆಸ್ಪತ್ರೆಗಳಲ್ಲಿ 1439 ಆಸ್ಪತ್ರೆಗಳು ಇನ್ನೂ ಲಸಿಕೆ ಅಭಿಯಾನ ಪ್ರಾರಂಭಿಸಿಲ್ಲ. ಈ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಸಲಹೆ ನೀಡಿದರು.

.

LEAVE A REPLY

Please enter your comment!
Please enter your name here