ನರೇಂದ್ರ ಮೋದಿ, ಅಮಿತ್ ಶಾ, ರಾಹುಲ್ ಗಾಂಧಿಗೆ ಎದುರಾಗಿದೆ ದೊಡ್ಡ ಸಂಕಷ್ಟ..!?

0
331

ಇಡೀ ದೇಶದಲ್ಲಿ ಲೋಕಸಭಾ ಚುನಾವಣೆಯ ಅಬ್ಬರ ಬಹಳ ಜೋರಾಗಿಯೇ ನಡೆಯುತ್ತಿದೆ ಎಲ್ಲಾ ರಾಜಕೀಯ ಪಕ್ಷದ ನಾಯಕರು ತಮ್ಮ ಪಕ್ಷದ ಪರವಾಗಿ ಬಹಳ ಜೋರಾಗಿಯೇ ದೇಶದ ಗದ್ದುಗೆಯನ್ನೇರಲು ಪ್ರಚಾರವನ್ನು ಮಾಡುತ್ತಿದ್ದಾರೆ, ಪ್ರತಿ ಸಭೆ, ಸಮಾರಂಭ, ಸಮಾವೇಶಗಳಲ್ಲಿ ಒಬ್ಬರ ಮೇಲೆ ಇನ್ನೊಬ್ಬರು ಆರೋಪಗಳನ್ನು ಮಾಡುತ್ತಾ ಮಾತಿನ ಸಮರವನ್ನು ನಡೆಸುವುದರ ಮೂಲಕ ಶತಾಯಗತಾಯ ಅಧಿಕಾರವನ್ನು ಹಿಡಿಯಲು ಬೇಕೆಂದು ಪಣತೊಟ್ಟು ನಿಂತಿದ್ದಾರೆ.

ಇದೀಗ ಈ ಅಬ್ಬರದ ಪ್ರಚಾರ ಮಾತುಗಳ ಸಮರಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಒಂದು ನಿರ್ಧಾರಕ್ಕೆ ಬರಲು ತೀರ್ಮಾನಿಸಿದೆ, ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಗೆ ಸಂಬಂಧಿಸಿದ ಪ್ರಕರಣಗಳ ಬಗ್ಗೆ ಚುನಾವಣಾ ಆಯೋಗ ಚರ್ಚೆಯನ್ನು ನಡೆಸಿ ತೀರ್ಮಾನಕ್ಕೆ ಬರಲು ಚಿಂತಿಸಿದೆ.


ಮೊನ್ನೆ ಮೊನ್ನೆಯಷ್ಟೇ ಕಾಂಗ್ರೆಸ್ ನಾಯಕಿ ಸುಶ್ಮಿತಾ ದೇವ್ ಅವರು ನರೇಂದ್ರ ಮೋದಿ ಹಾಗೂ ಅಮಿತ್ ಷಾ ಅವರು ಪದೇ ಪದೇ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿದ್ದರೂ ಸಹ ಚುನಾವಣಾ ಆಯೋಗ ಅವರ ವಿರುದ್ಧ ಯಾವುದೇ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂದು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿಯನ್ನು ಸಲ್ಲಿಸಿದ್ದರು, ಈ ಹಿನ್ನೆಲೆಯಲ್ಲಿ ಈ ಎಲ್ಲಾ ಪ್ರಕರಣಗಳನ್ನು ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ಸೂಚನೆಯನ್ನು ನೀಡಿತ್ತು,

ಇದರ ಅನುಸಾರ ಇದೀಗ ಈ ಮೂವರು ರಾಷ್ಟ್ರೀಯ ನಾಯಕರ ಮೇಲೆ ಕೇಳಿ ಬಂದಿರುವ ನೀತಿ ಸಂಹಿತೆ ಉಲ್ಲಂಘನೆಯ ಆರೋಪದ ಬಗ್ಗೆ ಚರ್ಚೆಯನ್ನು ನಡೆಸಲು ಚುನಾವಣಾ ಆಯೋಗ ತೀರ್ಮಾನವನ್ನು ಕೈಗೊಂಡಿದೆ.

ಇದರಿಂದಾಗಿ ಈ ಮೂವರು ರಾಷ್ಟ್ರೀಯ ನಾಯಕರ ವಿರುದ್ಧ ಚುನಾವಣಾ ಆಯೋಗ ಯಾವ ರೀತಿಯ ಕ್ರಮವನ್ನು ಕೈಗೊಳ್ಳಲಿದೆ ಎಂಬುದನ್ನು ಮುಂದಿನ ದಿನಗಳಲ್ಲಿ ಕಾದು ನೋಡಬೇಕಾಗಿದೆ.

LEAVE A REPLY

Please enter your comment!
Please enter your name here