ನವದೆಹಲಿ: ಲೋಕಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಸ್ಪಷ್ಟ ಬಹುಮತದ ಮೂಲಕ ಎನ್ಡಿಎ ಕೇಂದ್ರದಲ್ಲಿ ಮತ್ತೊಮ್ಮೆ ಸರ್ಕಾರ ರಚಿಸಲಿದೆ. ಮೂರನೇ ಬಾರಿ ಗದ್ದುಗೆ ಏರಲಿರುವ ನರೇಂದ್ರ ಮೋದಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದು, ಇಡೀ ದೆಹಲಿಗೆ 3 ಹಂತದ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ರಾಷ್ಟ್ರಪತಿ ಭವನಕ್ಕೆ ಐದು ಹಂತದ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ.
ಎಸ್ಡಬ್ಲ್ಯೂಎಟಿ ಹಾಗೂ ಎನ್ಎಸ್ಜಿ ಕಮಾಂಡೋಗಳು ಹದ್ದಿನ ಕಣ್ಣಿರಿಸಿದ್ದಾರೆ. ಪ್ಯಾರಾ ಮಿಲಿಟರಿ, ಎನ್ಎಸ್ಜಿ ಕಮಾಂಡೋಗಳು, ಡ್ರೋನ್ ಹಾಗೂ ಸ್ನೈಪರ್ಗಳ ಮೂಲಕ ಬಿಗಿ ಭದ್ರತೆ ಕಲ್ಪಿಸಲಾಗಿದೆ.
ಸುಮಾರು 5ಕ್ಕೂ ಹೆಚ್ಚು ರಾಷ್ಟ್ರಗಳಿಂದ ಗಣ್ಯರು ಆಗಮಿಸುತ್ತಿದ್ದಾರೆ, ಗಣ್ಯರ ಆಗಮನ ಹಿನ್ನೆಲೆ ಹೋಟೆಲ್ಗಳಿಗೂ ಭದ್ರತೆ ಕಲ್ಪಿಸಲಾಗಿದೆ. ದಎಹಲಿಯಲ್ಲಿ ಸುಮಾರು 2,500ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಪ್ರಧಾನಿ ಮೋದಿ ಇಂಡಿಯಾ ಗೇಟ್ ಬಳಿಯ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ನಮನ ಸಲ್ಲಿಸಲಿದ್ದಾರೆ, ಸಂಜೆ 7.15ಕ್ಕೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನೆರವೇರಲಿದೆ. ಮಾಜಿ ಪ್ರಧಾನಿ ವಾಜಪೇಯಿ ಅವರ ಸಮಾಧಿಗೆ ಭೇಟಿ ನೀಡಿ ನಮನ ಸಲ್ಲಿಸಿದ್ದಾರೆ.
ನರೇಂದ್ರ ಮೋದಿ 3ನೇ ಬಾರಿ ಪ್ರಧಾನಿಯಾಗಿ ಪ್ರಮಾಣವಚನ: ಭಾರೀ ಭದ್ರತೆ
Date: