No menu items!
16.8 C
Munich
Friday, August 21, 2026

ನಳೀನ್ ಕುಮಾರ್ ಕಟೀಲ್ ಗೆ ಟಿಕೆಟ್ ಕೈ ತಪ್ಪಿದರೂ ಮಹತ್ವದ ಹುದ್ದೆ ಕೊಟ್ಟ ಹೈಕಮಾಂಡ್.!

Must read

ಬೆಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ನಳಿನ್ ಕುಮಾರ್ ಕಟೀಲ್ ಮೂರು ಬಾರಿ ಸಂಸದರಾಗಿದ್ದಾರೆ. ಆದ್ರೆ, ಈ ಬಾರಿ ಹೈಕಮಾಂಡ್ ಹೊಸ ಮುಖಕ್ಕೆ ಮಣೆ ಹಾಕಿದೆ. ಟಿಕೆಟ್ ಕೈತಪ್ಪಿದ್ದರು ನಳಿನ್ ಕುಮಾರ್ ಕಟೀಲ್’ಗೆ ಮಹತ್ವದ ಜವಾಬ್ದಾರಿ ನೀಡಿದೆ. ಹೌದು.. ನಳಿನ್ ಕುಮಾರ್ ಕಟೀಲ್ ಅವರನ್ನು ಕೇರಳ ಲೋಕಸಭಾ ಚುನಾವಣೆಯ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.
ಇದರ ಜೊತೆ ತೆಲಂಗಾಣ ಮತ್ತು ಮಹಾರಾಷ್ಟ್ರ ಲೋಕಸಭಾ ಚುನಾವಣೆಯ ಉಸ್ತುವಾರಿಯನ್ನು ಕರ್ನಾಟಕದ ಬಿಜೆಪಿ ನಾಯಕರುಗಳಿಗೆ ನೀಡಲಾಗಿದೆ. ತೆಲಂಗಾಣ ಲೋಕಸಭಾ ಚುನಾವಣೆಯ ಬಿಜೆಪಿ ಉಸ್ತುವಾರಿಯಾಗಿ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ. ಇನ್ನು ನಿರ್ಮಲ್‌ ಕುಮಾರ್ ಸುರಾನಾ ಅವರನ್ನು ಮಹಾರಾಷ್ಟ್ರ ಬಿಜೆಪಿ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.

- Advertisement -spot_img

More articles

- Advertisement -spot_img

Latest article