ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಕೊಡದೇ ಇದ್ದಿದ್ದಕ್ಕೆ ಕೊಪಗೊಂಡು ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದಾರೆ ಎನ್ನಲಾಗುತ್ತಿದೆ. ಸಿದ್ದು ಪತ್ನಿ ನವಜೋತ್ ಕೌರ್ ಈ ಹಿಂದೆ ಬಿಜೆಪಿಯಿಂದ ಸ್ಪರ್ಧಿಸಿ ಅಮೃತಸರದ ಶಾಸಕಿಯಾಗಿ ಆಯ್ಕೆಯಾಗಿದ್ದರು. ಆದರೆ ಇದೀಗ ಕಾಂಗ್ರೆಸ್ನಿಂದ ಟಿಕೆಟ್ ಸಿಗದಿದ್ದ ಕಾರಣಕ್ಕೆ ಕಾಂಗ್ರೆಸ್ಸನ್ನು ಸಿದ್ದು ಪತ್ನಿ ತೊರೆಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ .
ಚಂಡೀಗಢ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಸಿಗದೇ ಇರಲು ಕಾರಣ ಪಂಜಾಬ್ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅಂತಾ ನವಜೋತ್ ಕೌರ್ ನೇರ ಆರೋಪ ಮಾಡಿದ್ದರು. ಪತ್ನಿಯ ಮಾತನ್ನು ಬೆಂಬಲಿಸಿದ್ದ ಸಿದ್ದು, ಆಕೆ ಎಂದು ಸುಳ್ಳು ಹೇಳುವುದಿಲ್ಲ ಅಂತಾ ಸಮರ್ಥಿಸಿಕೊಂಡಿದ್ದಾರೆ.