ನವದೆಹಲಿಯಲ್ಲಿ ಭೀಕರ ಕಾಲ್ತುಳಿತ: ರೈಲು ನಿಲ್ದಾಣದಲ್ಲಿ 15 ಜನರ ದಾರುಣ ಸಾವು!

Date:

ನವದೆಹಲಿ:- ಅತೀ ಹೆಚ್ಚಿನ ಜನ ಸಂದಣಿಯಿಂದ ಸಂಭವಿಸಿದ ಕಾಲ್ತುಳಿತದಲ್ಲಿ 15 ಮಂದಿ ಸಾವನ್ನಪ್ಪಿದ ಘಟನೆ ನವದೆಹಲಿ ರೈಲು ನಿಲ್ದಾಣದಲ್ಲಿ ಜರುಗಿದೆ.

ಶನಿವಾರ ರಾತ್ರಿ 10 ಗಂಟೆ ಸುಮಾರಿಗೆ ಕಾಲ್ತುಳಿತ ಸಂಭವಿಸಿದೆ ಎಂದು ತಿಳಿಸಿದೆ. 11 ಜನರಿಗೆ ಗಾಯಗೊಂಡಿದ್ದು, ಎಲ್ಎನ್​ಜೆಪಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನವದೆಹಲಿ ರೈಲು ನಿಲ್ದಾಣದಿಂದ ಪ್ರಯಾಗ್​ರಾಜ್​ ಮಹಾ ಕುಂಭಮೇಳಕ್ಕೆ ರೈಲ್ವೆ ಇಲಾಖೆ ಎರಡು ವಿಶೇಷ ರೈಲುಗಳನ್ನು ವ್ಯವಸ್ಥೆ ಮಾಡಿದೆ. ಈ ಹಿನ್ನೆಲೆಯಲ್ಲಿ ಪ್ರಯಾಗ್​ರಾಜ್​ಗೆ ತೆರಳಲು ವಿವಿಧ ರಾಜ್ಯಗಳಿಂದ ಬಂದಿದ್ದ ನೂರಾರು ಪ್ರಯಾಣಿಕರು ನವದೆಹಲಿ ರೈಲು ನಿಲ್ದಾಣದೊಳಗೆ ನುಗ್ಗಿದ್ದಾರೆ. ಪ್ಲಾಟ್​ಫಾರ್ಮ್​ ನಂಬರ್ 14 ಮತ್ತು 15ರಲ್ಲಿ ನಿಂತಿದ್ದ ಪ್ರಯಾಗ್​​​ರಾಜ್​ಗೆ ಹೊರಡುವ​ ವಿಶೇಷ ರೈಲಿನ ಜನರಲ್ ಬೋಗಿಗೆ ಹತ್ತುವಾಗ ನೂಕುನುಗ್ಗಲು ಸಂಭವಿಸಿ, ಕಾಲ್ತುಳಿತವಾಗಿದೆ.

ವಿಚಾರ ತಿಳಿದು ಸ್ಥಳಕ್ಕೆ ಎನ್​ಡಿಆರ್​ಎಫ್​ ಸಿಬ್ಬಂದಿ, ರೈಲ್ವೆ, ದೆಹಲಿ ಪೊಲೀಸ್​ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿದರು. ರಕ್ಷಣಾ ಕಾರ್ಯಾಚರಣೆ ಮುಕ್ತಾಯಗೊಂಡಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಎನ್​ಡಿಆರ್​ಎಫ್​ ಮಾಹಿತಿ ನೀಡಿದೆ.

Share post:

Subscribe

spot_imgspot_img

Popular

More like this
Related

ರಾಜ್ಯದಲ್ಲಿ ಕುಮಾರಸ್ವಾಮಿ ಅವರಂಥ ನಾಯಕರ ಕೊರತೆ ಕಾಣ್ತಿದೆ: ನಿಖಿಲ್ ಕುಮಾರಸ್ವಾಮಿ

ರಾಜ್ಯದಲ್ಲಿ ಕುಮಾರಸ್ವಾಮಿ ಅವರಂಥ ನಾಯಕರ ಕೊರತೆ ಕಾಣ್ತಿದೆ: ನಿಖಿಲ್ ಕುಮಾರಸ್ವಾಮಿ ಕೋಲಾರ: ರಾಜ್ಯದಲ್ಲಿ...

ಜನರ ಕಲ್ಯಾಣ ಯೋಜನೆಗಳಿಗೆ ಪ್ರತಿ ವರ್ಷ 1 ಲಕ್ಷ ಕೋಟಿ ವೆಚ್ಚ: ಡಿ.ಕೆ.ಶಿವಕುಮಾರ್

ಜನರ ಕಲ್ಯಾಣ ಯೋಜನೆಗಳಿಗೆ ಪ್ರತಿ ವರ್ಷ 1 ಲಕ್ಷ ಕೋಟಿ ವೆಚ್ಚ:...

ರಾಜ್ಯದಲ್ಲಿ ಮುಗಿದಿಲ್ಲ ವರುಣನ ಅಬ್ಬರ: 20 ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಮುಗಿದಿಲ್ಲ ವರುಣನ ಅಬ್ಬರ: 20 ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್...

ನಿಮ್ಮ ಪಾದಗಳಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ನಿರ್ಲಕ್ಷ್ಯ ಮಾಡಬೇಡಿ!

ನಿಮ್ಮ ಪಾದಗಳಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ನಿರ್ಲಕ್ಷ್ಯ ಮಾಡಬೇಡಿ! ನಮ್ಮ ದೇಹವು ಕೆಲವೊಮ್ಮೆ...