ನವರಾತ್ರಿಯ 5ನೇ ದಿನದ ದೇವಿ ಸ್ಕಂದಮಾತಾ: ಯಾರೀಕೆ, ಪೂಜಿಸುವುದು ಹೇಗೆ?

Date:

ನವರಾತ್ರಿಯ 5ನೇ ದಿನದ ದೇವಿ ಸ್ಕಂದಮಾತಾ: ಯಾರೀಕೆ, ಪೂಜಿಸುವುದು ಹೇಗೆ?

ಈ ಹಿಂದಿನ ಮೂರು ದಿನಗಳಲ್ಲಿ ಪಾರ್ವತೀ ದೇವಿಯ ಮೂರು ಅವತಾರಗಳನ್ನು ನೋಡಿದೆವು- ಹಿಮವಂತನ ಮಗಳಾದ ಶೈಲಪುತ್ರೀ, ನಂತರ ಶಿವನನ್ನು ಆರಾಧಿಸಿ ಪೂಜಿಸಿ ಮೆಚ್ಚಿಸುವ ಬ್ರಹ್ಮಚಾರಿಣೀ, ನಂತರ ಭಯಂಕರ ಸ್ವರೂಪದ ಶಿವನನ್ನು ಮದುವೆಯ ಮಂಟಪದಲ್ಲಿ ಅದೇ ಸ್ವರೂಪ ತಾಳಿ ಒಲಿಸಿಕೊಳ್ಳುವ ಚಂದ್ರಘಂಟಾ, ನಂತರ ರಾಕ್ಷಸರನ್ನು ನಾಶ ಮಾಡುವ ಸ್ವರೂಪದ ಕೂಷ್ಮಾಂಡಾ ದೇವಿ. ಐದನೇ ದಿನದಂದು ದೇವಿಯು ಸ್ಕಂದಮಾತೆಯಾಗಿ ಕಾಣಿಸಿಕೊಳ್ಳುತ್ತಾಳೆ.

ನವರಾತ್ರಿಯ ಐದನೇ ದಿನ ಪಂಚಮಿ ತಿಥಿಯಂದು ದುರ್ಗಾಮಾತೆಯ ಅವತಾರವಾದ ಸ್ಕಂದ ಮಾತೆಯನ್ನು ಆರಾಧಿಸಲಾಗುತ್ತದೆ. ಭಗವಾನ್‌ ಸ್ಕಂದನ ಮಾತೆಯಾಗಿ ದುರ್ಗೆಯು ಅವತರಿಸಿದ್ದರಿಂದ ‘ಸ್ಕಂದಮಾತಾ’ ಎಂದು ಪ್ರಸಿದ್ಧಳಾಗಿದ್ದಾಳೆ. ದೇವಿಯ ಈ ರೂಪವನ್ನು ಆರಾಧಿಸಿದರೆ ನಮ್ಮಲ್ಲಿರುವ ದೈವತ್ವವನ್ನು ಪೋಷಿಸುತ್ತಾಳೆ ಎಂಬ ನಂಬಿಕೆ ಇದೆ.

ಮಗನಾದ ಸ್ಕಂದನನ್ನು ತೊಡೆಯ ಮೇಲೆ ಕುಳ್ಳಿರಿಸಿಕೊಂಡಿರುವ ದುರ್ಗಾದೇವಿಯ ಈ ಅವತಾರ ಅತ್ಯಂತ ಪವಿತ್ರ ಹಾಗೂ ಅದ್ಭುತ ರೂಪ ಎಂದು ಹೇಳಲಾಗುತ್ತದೆ. ಈ ರೂಪದಲ್ಲಿ ತಾಯಿಯು ಸಂತೋಷದಿಂದ ಹಾಗೂ ಹಿತಕರವಾದ ಭಾವನೆಯೊಂದಿಗೆ ಕಾಣಿಸಿಕೊಳ್ಳುತ್ತಾಳೆ. ದೇವಿಯನ್ನು ಆರಾಧಿಸುವ ಭಕ್ತರು ಮಾತೆಯ ಆಶೀರ್ವಾದ ಮಾತ್ರವಲ್ಲದೇ ಮಗನಾದ ಸ್ಕಂದನ ಆಶೀರ್ವಾದವನ್ನೂ ಪಡೆಯಬಹುದು. ಈ ಅವತಾರವನ್ನು ಪೂಜಿಸುವುದರಿಂದ ಭಕ್ತರು ಎಲ್ಲಾ ಕಷ್ಟಗಳಿಂದ ಮುಕ್ತರಾಗಿ ದೇವಿಯ ಕೃಪೆಗೆ ಪಾತ್ರರಾಗುತ್ತಾರೆ

ಸ್ಕಂದ ಮಾತೆಯು ಬುಧಗ್ರಹದ ಮೇಲೆ ಅಧಿಪತ್ಯವನ್ನು ಹೊಂದಿರುತ್ತಾಳೆ. ಶುದ್ಧಮನಸ್ಸಿನಿಂದ, ಭಕ್ತಿಯಿಂದ ಯಾರು ಆರಾಧನೆ ಮಾಡುತ್ತರೋ ಅವರಿಗೆ ದೇವಿಯು ಹೆಸರು, ಸಂಪತ್ತು ಹಾಗೂ ಸಮೃದ್ಧಿಯನ್ನು ನೀಡುತ್ತಾಳೆ. ಜನ್ಮ ಕುಂಡಲಿಯಲ್ಲಿ ಬುಧನು ಪ್ರತಿಕೂಲ ಸ್ಥಾನದಲ್ಲಿದ್ದರೆ ಉಂಟಾಗುವ ತೊಂದರೆಯನ್ನು ದೇವಿಯು ನಿವಾರಿಸುತ್ತಾಳೆ.

ಸ್ಕಂದ ಮಾತೆಗೆ ನಾಲ್ಕು ಭುಜಗಳಿದ್ದು ಒಂದು ಕೈಯಲ್ಲಿ ಸ್ಕಂದನನ್ನು ಹಾಗೂ ಎರಡು ಕೈಯಲ್ಲಿ ಕಮಲವನ್ನು ಹಿಡಿದಿರುತ್ತಾಳೆ. ಇನ್ನೊಂದು ಹಸ್ತವು ಅಭಯ ಮುದ್ರೆಯಲ್ಲಿದ್ದು, ಸದಾ ತನ್ನ ಭಕ್ತರನ್ನು ಆಶೀರ್ವಾದ ಮಾಡುತ್ತಾಳೆ. ಇವಳ ಶರೀರದ ಬಣ್ಣವೂ ಸಂಪೂರ್ಣವಾಗಿ ಬೆಳ್ಳಗಿದ್ದು, ಕಮಲದ ಆಸನದಲ್ಲಿ ವಿರಾಜಮಾನಳಾಗಿದ್ದಾಳೆ. ಈ ಕಾರಣಕ್ಕಾಗಿ ಇವಳನ್ನು ಪದ್ಮಾಸನಾ ದೇವಿ ಎಂದು ಕರೆಯುತ್ತಾರೆ. ಸಿಂಹವು ಸ್ಕಂದಮಾತೆಯ ವಾಹನವಾಗಿದೆ.

ಪೂಜಾ ವಿಧಿ
ಸ್ಕಂದ ಮಾತೆಗೆ ಕೆಂಪು ಬಣ್ಣದ ಹೂವು ವಿಶೇಷವಾಗಿ ಗುಲಾಬಿ ಹೂವು ಪ್ರಿಯವಾದುದು. ಸ್ಕಂದ ಮಾತೆ ಹಾಗೂ ಮಾತೆಯ ಪುತ್ರ ಸ್ಕಂದ ಆಶೀರ್ವಾದಕ್ಕೆ ವಿಶೇಷ ಪೂಜೆಯನ್ನು ಈ ದಿನ ಮಾಡಬೇಕು. ಷೋಡಶೋಪಚಾರ ಪೂಜೆಯ ನಂತರ ಆರತಿಯೊಂದಿಗೆ ಪೂಜೆಯನ್ನು ಮುಕ್ತಾಯಗೊಳಿಸಬೇಕು. ಜೀವನದ ಸದ್ಗತಿಗೆ ಹಾಗೂ ಆಧ್ಯಾತ್ಮಿಕ ಸಂತುಷ್ಟಿಗಾಗಿ ಈ ಅವತಾರಕ್ಕೆ ಆರಾಧನೆ ಮಾಡಲಾಗುವುದು.

ಸ್ಕಂದಮಾತೆಯ ಮಂತ್ರ
ಓಂ ದೇವಿ ಸ್ಕಂದಮಾತಾಯ ನಮಃ
ಓಂ ದೇವಿ ಸ್ಕಂದಮಾತಾಯೈ ನಮಃ ಸಿಂಹಾಸಂಗತಂ ನಿತ್ಯಂ ಪದ್ಮಾಂಚಿತ ಕರದ್ವಾಯೇ
ಶುಭದಾಸ್ತು ಸದಾದೇವಿ ಸ್ಕಂದಮಾತಾ ಯಶಸ್ವಿನೀ”

ಪ್ರಾರ್ಥನೆ
”ಸಿಂಹಸಂಗತ ನಿತ್ಯಂ ಪದ್ಮಾಂಚಿತ ಕರದ್ವಾಯೇ
ಶುಭದಾಸ್ತು ಸದಾದೇವಿ ಸ್ಕಂದಮಾತಾ ಯಶಸ್ವಿನೀ

ಸ್ತುತಿ
”ಯಾ ದೇವಿ ಸರ್ವಭೂತೇಷು ಮಾ ಸ್ಕಂದಮಾತಾ ರೂಪೇಣ ಸಂಸ್ಥಿತಾ
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ

Share post:

Subscribe

spot_imgspot_img

Popular

More like this
Related

Elephant Teeth: ಆನೆ ದಂತಕ್ಕೆ ಏಕೆ ಅಷ್ಟೊಂದು ಬೇಡಿಕೆ! ಇಲ್ಲಿ ತಿಳಿಯಿರಿ

Elephant Teeth: ಆನೆ ದಂತಕ್ಕೆ ಏಕೆ ಅಷ್ಟೊಂದು ಬೇಡಿಕೆ! ಇಲ್ಲಿ ತಿಳಿಯಿರಿ ಇತಿಹಾಸದುದ್ದಕ್ಕೂ...

ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ

ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ಮಂಗಳೂರು: ಮಹೇಶ್...

ಕಲ್ಯಾಣ ಕರ್ನಾಟಕದ ಬಗ್ಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ: ಸಿಸಿ ಪಾಟೀಲ್ ಬೇಸರ

ಕಲ್ಯಾಣ ಕರ್ನಾಟಕದ ಬಗ್ಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ: ಸಿಸಿ ಪಾಟೀಲ್ ಬೇಸರ ಬೆಂಗಳೂರು:-ಕಲ್ಯಾಣ...

ಅಕ್ರಮ ಆಸ್ತಿ ಕೇಸ್: ಶೃಂಗೇರಿ ಶಾಸಕ ರಾಜೇಗೌಡ್ರಿಗೆ ಲೋಕಾಯುಕ್ತ ಶಾಕ್

ಅಕ್ರಮ ಆಸ್ತಿ ಕೇಸ್: ಶೃಂಗೇರಿ ಶಾಸಕ ರಾಜೇಗೌಡ್ರಿಗೆ ಲೋಕಾಯುಕ್ತ ಶಾಕ್ ಚಿಕ್ಕಮಗಳೂರು: ಶೃಂಗೇರಿ...