ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್ ತಿರಗೇಟು
ಬೆಂಗಳೂರು: ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಛಲವಾದಿ ನಾರಾಯಣಸ್ವಾಮಿಗೆ ತಿರಗೇಟು ನೀಡಿದ್ದಾರೆ. ನಗರದಲಲಿ ಮಾತನಾಡಿದ ಅವರು, ಮಿಸ್ಟರ್ ನಾರಾಯಣಸ್ವಾಮಿ, ಇಲ್ಲಿದೆ ನೋಡಿ ಲೋಕಾಯುಕ್ತಕ್ಕೆ ನಾನು ಸಲ್ಲಿಸಿರೋ ಅಫಿಡವಿಟ್! ಜವಾಬ್ದಾರಿಯುತ ಸ್ಥಾನದಲ್ಲಿರೋ ನೀವು ನಿಮ್ಮ ಬಾಯಿ ತೆವಲಿಗಾಗಿ ಮನಸ್ಸಿಗೆ ಬಂದಂತೆ ಸುಳ್ಳು ಹೇಳಬಾರದು.
ಇದು ನಿಮಗೆ ಘನತೆ ತರುವುದಿಲ್ಲ. ನಾನು ಪಾರದರ್ಶಕ ವ್ಯಕ್ತಿ. ಏನನ್ನೂ ಮುಚ್ಚಿಟ್ಟುಕೊಳ್ಳಬಾರದು ಅಂತಲೇ ನಿಜ ಹೇಳಿದ್ದೇನೆ. ನನಗೆ ಮತ್ತು ಸಿಎಂ ಸಿದ್ದರಾಮಯ್ಯ ಅವರಿಗೆ ನಮಗೆ ಇಷ್ಟವಾದ ವಾಚ್ ಕಟ್ಟಿಕೊಳ್ಳುವ ಯೋಗ್ಯತೆ ಇಲ್ಲವೇ? ಹಕ್ಕು ಇಲ್ಲವೇ..? “ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ” ಆಡಬೇಡಿ. ನಿಮಗಿರೋ ಸಾಂವಿಧಾನಿಕ ಅಧಿಕಾರ, ಜವಾಬ್ದಾರಿಯನ್ನು ವಿವೇಕದಿಂದ ನಿರ್ವಹಿಸಿ. ಅವಿವೇಕಿಯಂತೆ ಆಡಬೇಡಿ..! ಬೇಕಿದ್ದರೆ ಲೋಕಾಯುಕ್ತ ಕಚೇರಿಗೆ ಹೋಗಿ ನನ್ನ ಅಫಿಡವಿಟ್ ಚೆಕ್ ಮಾಡಿಕೊಳ್ಳಿ” ಎಂದು ಹರಿಹಾಯ್ದರು.






