ನಾಗಮಂಗಲ ಗಲಭೆ ಕೇಸ್: ಕಾಂಗ್ರೆಸ್ ತುಷ್ಟೀಕರಣದ ಫಲ ಎಂದ HD ಕುಮಾರಸ್ವಾಮಿ!

Date:

ನಾಗಮಂಗಲ ಗಲಭೆ ಕೇಸ್: ಕಾಂಗ್ರೆಸ್ ತುಷ್ಟೀಕರಣದ ಫಲ ಎಂದ HD ಕುಮಾರಸ್ವಾಮಿ!

ಬೆಂಗಳೂರು:- ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಒಂದು ಸಮುದಾಯದ ಪುಂಡರು ನಡೆಸಿದ ದಾಳಿಯನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಖಂಡಿಸಿದ್ದಾರೆ.

ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅವರು, ಕಾಂಗ್ರೆಸ್‌ ಪಕ್ಷ ಮತ್ತು ರಾಜ್ಯ ಸರ್ಕಾರ ರಾಜಕೀಯ ಸ್ವಾರ್ಥಕ್ಕಾಗಿ ಒಂದು ನಿರ್ದಿಷ್ಟ ಸಮುದಾಯವನ್ನು ಅತಿಯಾಗಿ ಓಲೈಸಿ ತುಷ್ಟೀಕರಣ ಮಾಡಿದ ಫಲವೇ ಈ ಹೇಯ ಘಟನೆ ಎಂದಿದ್ದಾರೆ.

ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ಗಣಪತಿ ದೇವರ ಮೆರವಣಿಗೆಯಲ್ಲಿ ಶಾಂತಿಯುತವಾಗಿ ತೆರಳುತ್ತಿದ್ದ ಭಕ್ತರನ್ನು ಗುರಿ ಮಾಡಿ ಒಂದು ಸಮುದಾಯದ ಪುಂಡರು ಉದ್ದೇಶ ಪೂರ್ವಕವಾಗಿಯೇ ದಾಂಧಲೆ ಎಬ್ಬಿಸಿದ್ದಾರೆ’.

ಪುಂಡರು ಸಾರ್ವಜನಿಕರು-ಪೊಲೀಸರ ಮೇಲೆ ಕಲ್ಲು, ಚಪ್ಪಲಿ ಎಸೆದು ಪೆಟ್ರೋಲ್ ಬಾಂಬ್ ಸ್ಫೋಟಿಸಿ ತಲ್ವಾರ್ ಝಳಪಿಸುವ ದುಸ್ಸಾಹಸಕ್ಕೆ ಕೈ ಹಾಕಿರುವುದು ಪಟ್ಟಣದಲ್ಲಿ ಶಾಂತಿ ಸುವ್ಯವಸ್ಥೆ ವೈಫಲ್ಯವಾಗಿರುವುದಕ್ಕೆ ಸಾಕ್ಷಿ. ಪೊಲೀಸ್ ಠಾಣೆ ಎದುರು ರಕ್ಷಣೆ ಕೊಡಿ ಎಂದು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದವರ ಮೇಲೆಯೇ ಆ ಕೋಮಿನ ಪುಂಡರು ದಬ್ಬಾಳಿಕೆ ನಡೆಸುತ್ತಾರೆ ಎಂದರೆ ನಾವು ಎಲ್ಲಿದ್ದೇವೆ ಎನ್ನುವ ಅನುಮಾನ ಬರುತ್ತದೆ. ಇಲ್ಲಿ ಸ್ಥಳೀಯ ಪೊಲೀಸರ ವೈಫಲ್ಯವೂ ಎದ್ದು ಕಾಣುತ್ತಿದೆ’ ಎಂದು ಆರೋಪಿಸಿದರು.

ಸಾರ್ವಜನಿಕರು ಶಾಂತಿ ಕಾಪಾಡಬೇಕು ಎನ್ನುವುದು ನನ್ನ ಕಳಕಳಿಯ ಮನವಿ. ತಕ್ಷಣವೇ ಪಟ್ಟಣದಲ್ಲಿ ಶಾಂತಿ ಮರುಸ್ಥಾಪನೆ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು. ಅಲ್ಲದೇ, ಈ ಪ್ರಕರಣ ನೆಪದಲ್ಲಿ ವಿರೋಧ ಪಕ್ಷಗಳ ಮುಖಂಡರು, ಕಾರ್ಯಕರ್ತರ ಮೇಲೆ ಪೊಲೀಸರು ದರ್ಪ ತೋರಿದರೆ ಸಹಿಸುವ ಪ್ರಶ್ನೆ ಇಲ್ಲ’ ಎಂದು ಹೆಚ್‌.ಡಿ ಕುಮಾರಸ್ವಾಮಿ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌ ಸೇರಿ 70 ಮಂದಿಗೆ ಗೌರವ

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌...

ಚಿತ್ತಾಪುರದಲ್ಲಿ RSS ಪಥಸಂಚಲನ: ಕಲಬುರಗಿ ಹೈಕೋರ್ಟ್ ಮಹತ್ವದ ಸೂಚನೆ

ಚಿತ್ತಾಪುರದಲ್ಲಿ RSS ಪಥಸಂಚಲನ: ಕಲಬುರಗಿ ಹೈಕೋರ್ಟ್ ಮಹತ್ವದ ಸೂಚನೆ ಕಲಬುರಗಿ: ಚಿತ್ತಾಪುರದಲ್ಲಿ ನವೆಂಬರ್...

ಟನಲ್ ರಸ್ತೆ ಬೇಡ ಹೇಳುವುದಕ್ಕೆ ಈ ತೇಜಸ್ವಿ ಸೂರ್ಯ ಯಾರು?: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

ಟನಲ್ ರಸ್ತೆ ಬೇಡ ಹೇಳುವುದಕ್ಕೆ ಈ ತೇಜಸ್ವಿ ಸೂರ್ಯ ಯಾರು?: ಡಿಸಿಎಂ...

ಮತ್ತೆ ಇಳಿಕೆಯ ಹಾದಿಗೆ ಬಂದ ಚಿನ್ನ, ಬೆಳ್ಳಿ ಬೆಲೆ! ಹೀಗಿದೆ ದರ

ಮತ್ತೆ ಇಳಿಕೆಯ ಹಾದಿಗೆ ಬಂದ ಚಿನ್ನ, ಬೆಳ್ಳಿ ಬೆಲೆ! ಹೀಗಿದೆ ದರ ಬೆಂಗಳೂರು:...