ನಾಗೇಂದ್ರ ರಾಜೀನಾಮೆಗೆ ಒತ್ತಾಯ ವಿಚಾರ: ಹೆಚ್.ಸಿ.ಮಹದೇವಪ್ಪ ಹೇಳಿದ್ದೇನು..?

Date:

ಬೆಂಗಳೂರು: ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಒತ್ತಾಯಿಸುತ್ತಿರುವ ವಿಚಾರಕ್ಕೆ ಸಚಿವ ಹೆಚ್.ಸಿ.ಮಹದೇವಪ್ಪ ಪ್ರತಿಕ್ರಿಯೇ ನೀಡಿದರು. ಬೆಂಗಳೂರಲ್ಲಿಂದು ಮಾತನಾಡಿದ ಅವರು, ಚಂದ್ರಶೇಖರನ್ ಒಬ್ಬ ಒಳ್ಳೆಯ ಅಧಿಕಾರಿ. ಅವರ ಆತ್ಮಹತ್ಯೆಯಿಂದ ತುಂಬ ಬೇಸರವಾಗಿದೆ. ಡೆತ್ ನೋಟ್ನಲ್ಲಿ ಕೆಲವು ಆರೋಪಗಳನ್ನು ಮಾಡಿದ್ದಾರೆ. ಪ್ರಕರಣವನ್ನು ಸರ್ಕಾರ ಕೂಡಲೇ ತನಿಖೆಗೆ ಒಪ್ಪಿಸಿದೆ. ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಯುತ್ತದೆ. ಆ ಬಳಿಕ ಸತ್ಯಾಸತ್ಯತೆ ಹೊರಬರಲಿದೆ.
ಇಲ್ಲಿ ದಲಿತರು ದಲಿತೇತರ ಹಣ ಅಂತಲ್ಲ. ಅದು ಸರ್ಕಾರದ ಹಣ. ಅಂತೆ ಕಂತೆಗಳ ಮೇಲೆ ಮಾತನಾಡಲು ಆಗಲ್ಲ. ಈಶ್ವರಪ್ಪ ಪ್ರಕರಣವೇ ಬೇರೆ, ಇದು ಬೇರೆ. ಅದಕ್ಕೂ ಇದಕ್ಕೂ ಹೋಲಿಕೆ ಸರಿಯಲ್ಲ. ವಿರೋಧ ಪಕ್ಷದವರು ರಾಜೀನಾಮೆ ಕೇಳ್ತಾರೆ. ಸತ್ಯಾಸತ್ಯತೆ ಹೊರಗಡೆ ಬರಲಿ. ಆ ನಂತರ ಸರ್ಕಾರ ತೀರ್ಮಾನ ಮಾಡುತ್ತದೆ ಎಂದು ಹೇಳಿದರು. ಸರ್ಕಾರ ಪಿತೂರಿ ನಡೆಸುತ್ತಿದೆ ಎಂಬ ಪ್ರಜ್ವಲ್ ರೇವಣ್ಣ ಆರೋಪಕ್ಕೆ ಪ್ರತಿಕ್ರಿಯಿಸುತ್ತಾ, ಪಿತೂರಿ ಪ್ರಶ್ನೆಯೇ ಬರುವುದಿಲ್ಲ. ಅವರೇ ಎಲ್ಲವನ್ನೂ ಮಾಡಿರೋದು. ಹಾಗಿದ್ದಾಗ ಪಿತೂರಿ ಪ್ರಶ್ನೆ ಯಾಕೆ ಬರುತ್ತೆ? ಎಸ್‌ಐಟಿ ತನಿಖೆಯಲ್ಲಿ ಸರ್ಕಾರ ಯಾಕೆ ಹಸ್ತಕ್ಷೇಪ ಮಾಡುತ್ತದೆ? ಎಂದರು.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...