ನಾಗ್ಪುರದಲ್ಲಿ ಸೋಲಾರ್ ಉತ್ಪನ್ನಗಳ ಕಂಪನಿಯಲ್ಲಿ ಸ್ಫೋಟ !

Date:

ಜೈಪುರ: ಮಹಾರಾಷ್ಟ್ರದ ನಾಗ್ಪುರ ಕಂಪನಿಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 9 ಜನ ಸಾವನ್ನಪ್ಪಿದ್ದು ಹಲವರು ಗಾಯಗೊಂಡಿರುವ ಘಟನೆ ನಡೆದಿದೆ. ಮೂಲಗಳ ಪ್ರಕಾರ, ಭಾನುವಾರ ಬೆಳಗ್ಗೆ 9:30 ಗಂಟೆ ವೇಳೆಗೆ ಬಜಾರ್ಗಾಂವ್ ಪ್ರದೇಶದಲ್ಲಿರುವ ಸೋಲಾರ್ ಇಂಡಸ್ಟ್ರೀಸ್ ಇಂಡಿಯಾ ಲಿಮಿಟೆಡ್ನಲ್ಲಿ ಸ್ಫೋಟ ಸಂಭವಿಸಿದೆ. ಸ್ಪೋಟದಲ್ಲಿ ಕನಿಷ್ಠ 9 ಮಂದಿ ಸಾವನ್ನಪ್ಪಿದ್ದು, ಘಟನೆಯಲ್ಲಿ ಗಾಯಗೊಂಡವರ ಸ್ಥಿತಿ ಚಿಂತಾಜನಕವಾಗಿದೆ.
ಕಲ್ಲಿದ್ದಲು ಸ್ಫೋಟಗೊಳಿಸಲು ಸ್ಫೋಟಕಗಳನ್ನು ಪ್ಯಾಕ್ ಮಾಡುತ್ತಿದ್ದ ವೇಳೆ ಘಟನೆ ಸಂಭವಿಸಿದೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ. ಘಟನೆ ಕುರಿತು ಮಾಹಿತಿ ಪಡೆದ ತಕ್ಷಣ ಪೊಲೀಸರ ತಂಡ ಸ್ಥಳಕ್ಕೆ ಆಗಮಿಸಿದೆ. ಸೋಲಾರ್ ಇಂಡಸ್ಟ್ರೀಸ್ ಇಂಡಿಯಾ ಲಿಮಿಟೆಡ್ ಕಂಪನಿಯು ದೇಶದ ರಕ್ಷಣಾ ಇಲಾಖೆಗೆ ಸ್ಫೋಟಕಗಳು ಮತ್ತು ಇತರ ರಕ್ಷಣಾ ಸಾಧನಗಳ ಪೂರೈಕೆಯೊಂದಿಗೆ ವ್ಯವಹರಿಸುತ್ತಿರುವುದಾಗಿ ತಿಳಿದುಬಂದಿದೆ.

Share post:

Subscribe

spot_imgspot_img

Popular

More like this
Related

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್!

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್! ಬೆಂಗಳೂರು:- ಆಟೋಗೆ ಕಸ...

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್!

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್! ನೆಲಮಂಗಲ: ನೆಲಮಂಗಲದ ಅಪಾರ್ಟ್ಮೆಂಟ್‌ವೊಂದರಲ್ಲಿ 24ನೇ ಮಹಡಿಯಿಂದ...

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌ ಬೆಂಗಳೂರು:...

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...